ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

Date:

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌ ರಾಜ್ಯ ಹೆದ್ದರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘ ಕರೆದಿದ್ದ ಪ್ರತಿಭಟನೆಗೆ ನೂರಾರು ರೈತರು ಬೆಂಬಲಿಸಿದ್ದು ಕೆರೂರು ಕ್ರಾಸ್‌ ಬಳಿ ರಸ್ತೆ ತಡೆ ನಡೆಸಿದ್ದಾರೆ.

ರಾಜ್ಯ ಹೆದ್ದಾರಿ ತಡೆದ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ನಾಲೆ ನೀರು ಬಿಡದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಪರಗೌಡ, “ರೂಪಿನಾಳ, ಕೆರೂರು, ಜೋಡಕುರಳಿ, ಅರಬ್ಯನವಾಡಿ ಗ್ರಾಮಗಳಿಗೆ ಘಟಪ್ರಭಾ ಎಡದಂಡೆ ನಾಲೆಯ ನೀರು ಹರಿಸಿದರೆ ಇಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದು ಮನವಿ ಸಲ್ಲಿಸಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕಾಳುವೆಗೆ ನೀರು ಬರದ ಕಾಋಣ ರೈತರು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ನೀರು ಬಿಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ,” ಎಂದಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ರೈತ ಮುಖಂಡರು, ಮಳೆ ಬರದ ಕಾರಣ, ಬೆಳೆಗಳೇಲ್ಲ ಒಣಗಲಾರಂಭಿಸಿವೆ. ಜಮೀನುಗಳಿಗೆ ನೀರುಣಿಸಲು ಕಾಲುವೆಗಳಲ್ಲಿ ನೀರು ಸಹ ಇಲ್ಲ. ಈ ಕೂಡಲೇ ನಾಲೆಗೆ ನೀರು ಹರಿಸಿ. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ನೀರಾವರಿ ಅಧಿಕಾರಿ ನಾಗೇಶ ಕೋಲ್ಕಾರ,”ನೀರಾವವರಿ ಸಲಹಾ ಸಮಿತಿ ಇದೆ. ಬೇಡಿಕೆಗನುಗುಣವಾಘಿ ನೀರು ಬಿಡಲು ಆದೇಶಿಸಿದ್ದಾರೆ. ಸಲಹಾ ಸಮಿತಿ ಒಪ್ಪಿದ ಕೂಡಲೇ ನೀರು ಬಡಲಾಗುತ್ತದೆ. ಕಾಳುವೆಗಳನ್ನು ಸ್ವಚ್ಚ ಗೊಳಿಸಿ ನೀರುಹರಿಸಲಾಗುವುದು. ಮುಂದಿನ ಎಂಟು ದಿನದೊಳಗೆ ಕೆರೂರು ಗ್ರಾಮಕ್ಕೆ ನೀರು ಹರಿಸುವ ಭರವಸೆ ಇದೆ,” ಎಂದು ರೈತರನ್ನು ಸಮಾಧಾನ ಪಡಿಸುವ ಯತ್ನ ಮಾಡಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.   

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗಡಾಡಿ, ಅಥಣಿ ರೈತ ಸಂಘದ ಅಧ್ಯಕ್ಷ ಮಹಾದೇವ ಮಡಿವಾಳ, ದುಂಡಪ್ಪ ಹಿಂಗ್ಲಾಜೆ, ಪ್ರತಾಪ ಪಾಟೀಲ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರಿ ಬಿಗಿ ಪೊಲೀಸ್‌ ಬಂದೋಬಸ್ತ ಏರ್ಪಡಿಸಲಾಗಿತ್ತು. ಒಬ್ಬ ಡಿಎಆರ್‌, ಎರಡು ಕೆಎಸ್‌ಆರ್‌ಪಿ ತುಕಡಿ, ಒಬ್ಬರು ಡಿವೈಎಸ್‌ಪಿ, ಸಿಪಿಐ, ನಾಲ್ವರು ಪಿಎಸ್‌ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...