ಬೆಳಗಾವಿ | ಫೈನಾನ್ಸ್ ವಂಚನೆ ಪ್ರಕರಣ: ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಸಿಐಡಿ ವಶಕ್ಕೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

‘ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಸ್ವಾಮೀಜಿಗೆ ಮತ್ತು ಅವರ ಕುಟುಂಬದವರಿಗೆ ಹಣ ವರ್ಗಾವಣೆ ಆಗಿದೆ. ಆ ಹಣದಲ್ಲೇ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆ’ ಎಂಬ ಆರೋಪವಿದೆ. ಮಠದ ಜಾತ್ರೆ ಮತ್ತು ಮಹಾಪ್ರಸಾದ ವ್ಯವಸ್ಥೆಗೂ ಆರೋಪಿಗಳು ಆರ್ಥಿಕ ನೆರವು ಒದಗಿಸಿದ್ದಾರೆಂದು ಗೊತ್ತಾಗಿದೆ. ಅದಕ್ಕೆ ಸದಾಶಿವ ಸ್ವಾಮೀಜಿ ವಶಕ್ಕೆ ಪಡೆದು, ಗೋಕಾಕ ಶಹರ ಠಾಣೆಯಲ್ಲಿ ಸಿಐಡಿ ಪೊಲೀಸರಿಂದ ವಿಚಾರಣೆ ನಡೆದಿದೆ.

ಈ ಬ್ಯಾಂಕ್‌ನಲ್ಲಿ ₹74 ಕೋಟಿಗೂ ಅಧಿಕ ಮೊತ್ತದ ವಂಚನೆಯಾಗಿದ್ದು, ಅಲ್ಲಿ ಕೆಲಸ ಮಾಡುವ ಸಿಬ್ಬಂದಿಯೇ ಅಕ್ರಮದಲ್ಲಿ ಭಾಗಿಯಾದ ಆರೋಪ ಕೇಳಿಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...