ಸೋಲಿನ ಸೇಡು ತೀರಿಸಿಕೊಳ್ಳಲು 2028ರ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದರೇ ಬಾಲಚಂದ್ರ ಜಾರಕಿಹೊಳಿ?

Date:

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಕರೆಯಿಸಿ ನಡೆಸಿದ ಕಾರ್ಯಕ್ರಮವು ಕೇವಲ ಸನ್ಮಾನ ಸಮಾರಂಭವೋ, ಅಥವಾ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹಾಲಿ ಶಾಸಕ ಅಶೋಕ ಪಟ್ಟಣ ಹಾಗೂ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಒಂದಾಗಿ ಬಾಲಚಂದ್ರ ಜಾರಕಿಹೊಳಿಯವರ ಅಭ್ಯರ್ಥಿಯನ್ನು ಸೋಲಿಸಿದ್ದರ ಸೇಡನ್ನು ತೀರಿಸಿಕೊಳ್ಳಲು ಹಾಗೂ 2028ರ ಚುನಾವಣೆಗೆ ಪೂರ್ವ ತಯಾರಿ ನಡೆಸಲು ರೂಪಿಸಿದ ರಾಜಕೀಯ ವೇದಿಕೆಯಾಗಿತ್ತೇ? ಎಂಬ ಪ್ರಶ್ನೆ ಇದೀಗ ಕ್ಷೇತ್ರ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ.

ರಾಮದುರ್ಗ ತಾಲೂಕಿನ ಸಹಕಾರಿ ಸಂಘಗಳ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಭಾಷಣವೇ ಈ ಚರ್ಚೆಗೆ ಕಾರಣವಾಗಿದೆ.

“ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಾಗ ನಮಗೆ ನಾಲ್ಕು ಮತಗಳನ್ನೂ ಪಡೆಯಲು ಸಾಧ್ಯವಿಲ್ಲ ಎಂದು ವಿರೋಧಿಗಳು ಹೇಳಿದರು. ಆದರೆ ನಾವು 16 ಮತಗಳನ್ನು ಪಡೆದೆವು. ಇಲ್ಲಿ ಶಾಸಕರು, ಮಾಜಿ ಶಾಸಕರು ಘಟಾನುಘಟಿಗಳು, ಪೊಲೀಸರು, ತಹಶೀಲ್ದಾರರು ಅವರ ಕಡೆ ಇದ್ದರು. ಇವೆಲ್ಲವನ್ನು ಮೀರಿ ಸೊಸೈಟಿ ಸದಸ್ಯರನ್ನು ಸೇರಿಸಿ ಠರಾವು ತೆಗೆದುಕೊಳ್ಳುವುದು ಸುಲಭವಾಗಿರಲಿಲ್ಲ. ಸ್ವಲ್ಪ ಫ್ರೀ ಬಿಟ್ಟಿದ್ದರೆ ಫಲಿತಾಂಶವೇ ಬೇರೆ ಆಗುತ್ತಿತ್ತು” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ, ಈ ಕಾರ್ಯಕ್ರಮಕ್ಕೆ ಬರಬೇಡಿ ಎಂದು ಒತ್ತಡ ಹಾಕಿದರೂ ನೀವು ಬಂದಿದ್ದೀರಿ. ನಮ್ಮ ಜತೆ ಹಾಲಿ ಶಾಸಕರು ಇಲ್ಲ, ಮಾಜಿ ಶಾಸಕರು ಇಲ್ಲ, ಎಂದು ಹೇಳಿದರು. ಇಂದಿನ ಕಾರ್ಯಕ್ರಮದಿಂದ ಹಾಲಿ ಮತ್ತು ಮಾಜಿ ಶಾಸಕರಿಗೆ ನಿದ್ದೆ ಬರುವದಿಲ್ಲ ಎಂದು ಹೇಳಿದರು.

ಮಾಜಿ ಶಾಸಕರ ವಿರುದ್ಧ ಕಟು ಟೀಕೆ

ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು ನಮಗೆ ಹೊರಗಿನವರು ಎನ್ನುತ್ತಾರೆ. ನಾವು ಪಾಕಿಸ್ತಾನದವರಲ್ಲ. 2018ರ ಚುನಾವಣೆಯಲ್ಲಿ ನಾನು ಮತ್ತು ಉಮೇಶ ಕತ್ತಿ ಇರದಿದ್ದರೆ ಬಿಜೆಪಿಯಿಂದ ಅವರಿಗೆ ಟಿಕೆಟ್ ಸಿಗುತ್ತಿರಲಿಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಪಂಚಕಟ್ಟಿಮಠ ಅವರಿಗೆ ಟಿಕೆಟ್ ಕೊಡುತ್ತಿದ್ದರು. ಆಗ ನಾವು ಒಳಗಿನವರಾಗಿದ್ದೆವು, ಈಗ ಹೊರಗಿನವರಾಗಿದ್ದೇವೆಯೇ? ಎಂದು ಪ್ರಶ್ನಿಸಿದರು.

ನಾನು ರಾಮದುರ್ಗಕ್ಕೆ ಗಟ್ಟಿಯಾಗಿ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೆ ಈಗಿನಿಂದಲೇ ಕೆಲಸ ಮಾಡಬೇಕು ಎಂದು ಅವರ ಬೆಂಬಲಿಗರಿಗೆ ಸೂಚಿಸಿದರು.

ರಾಮದುರ್ಗದಲ್ಲಿ ಹೊಸ ಶಕ್ತಿ ತಯಾರಾಗುತ್ತದೆ. ಕ್ಷೇತ್ರದ ಜನರ ಸಮಸ್ಯೆ ಬಂದಾಗ ನಾಯಕರು ಗಟ್ಟಿಯಾಗಿ ನಿಲ್ಲಬೇಕು. 2028ರ ಚುನಾವಣೆಯಲ್ಲಿ ಹಣೆಬರಹದಲ್ಲಿ ಇದ್ದವರಿಗೆ ಟಿಕೆಟ್ ಸಿಗುತ್ತದೆ ಎಂದು ಅವರು ಹೇಳಿದರು.

ಈ ಕುರಿತು ಈ ದಿನ.ಕಾಮ್ ಬಾಲಚಂದ್ರ ಜಾರಕಿಹೊಳಿಯವರನ್ನು ಈ ಕಾರ್ಯಕ್ರಮದ ಮೂಲಕ ನೀವು ಮುಂದಿನ ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತಿದ್ದಿರಾ? ಎಂದು ಪ್ರಶ್ನಿಸಿದಾಗ ಅವರು, “ನಾನು ಮತ್ತು ಅಣ್ಣಾಸಾಹೇಬ ಜೊಲ್ಲೆ ಬಿಜೆಪಿಯವರು. ಕ್ಷೇತ್ರದಲ್ಲಿ ಬಿಜೆಪಿ ಬೆಳೆಸುವ ಕೆಲಸ ಮಾಡುತ್ತೇವೆ. 2028ರಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ. ಸರ್ವೇ ವರದಿ ಹಾಗೂ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ರಾಮದುರ್ಗದಲ್ಲಿ ಬಿಜೆಪಿ ಗೆಲುವಿಗೆ ಉತ್ತಮ ವಾತಾವರಣವಿದೆ” ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯ ಸೋಲಿನ ಸೇಡು

ಒಂದು ವೇಳೆ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಸಹೋದರ ಮಲ್ಲಣ್ಣ ಯಾದವಾಡ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾತಿಗೆ ಒಪ್ಪಿಕೊಂಡಿದ್ದರೆ, ರಾಮದುರ್ಗದಲ್ಲಿ ಹೊಸ ರಾಜಕೀಯ ಶಕ್ತಿ ನಿರ್ಮಾಣದ ಅವಶ್ಯಕತೆ ಎದುರಾಗುತ್ತಿರಲಿಲ್ಲವೋ ಎಂಬ ಚರ್ಚೆ ಕ್ಷೇತ್ರದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯ ನಂತರ ಉಂಟಾದ ರಾಜಕೀಯ ಪೈಪೋಟಿಯೇ ಇದೀಗ ಕ್ಷೇತ್ರದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಗಳ ನಡುವೆಯೇ 2028ರ ವಿಧಾನಸಭಾ ಚುನಾವಣೆಯನ್ನು ಕಣ್ಣಿನಲ್ಲಿ ಇಟ್ಟು ಸಂಘಟನೆ ಬಲಪಡಿಸುವ ಪ್ರಯತ್ನಗಳು ಆರಂಭವಾಗಿವೆ ಎಂಬ ಮಾತುಗಳು ಹರಿದಾಡುತ್ತಿವೆ.

ಇನ್ನೊಂದೆಡೆ, ಹಾಲಿ ಶಾಸಕ ಅಶೋಕ ಪಟ್ಟಣ ಅವರು ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚು ಗಮನ ಹರಿಸದಿದ್ದರೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಕಠಿಣ ಸವಾಲು ಎದುರಾಗುವ ಸಾಧ್ಯತೆಗಳಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ರಾಮದುರ್ಗ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳಲ್ಲಿ 2028ರ ಚುನಾವಣೆಯ ಮಾತು ಈಗಿನಿಂದಲೇ ಕೇಳಿಬರುತ್ತಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಹೇಳಿಕೆಗಳ ಬಳಿಕ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯ ರಾಜಕೀಯ ವಾತಾವರಣ ಈಗಲೇ ರೂಪುಗೊಳ್ಳುತ್ತಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬೆಳಗಾವಿ | ನಾವು ಅಧಿಕಾರಕ್ಕೆ ಬಂದ ನಂತರ 520 ಕೋಟಿ ಠೇವಣಿ ಹೆಚ್ಚಳ: ಅಣ್ಣಾಸಾಹೇಬ ಜೊಲ್ಲೆ

ಒಟ್ಟಿನಲ್ಲಿ, ರಾಮದುರ್ಗದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮ ಕೇವಲ ಗೌರವ ಸಮಾರಂಭವಷ್ಟೇ ಅಲ್ಲದೆ, ಕ್ಷೇತ್ರದ ರಾಜಕೀಯ ದಿಕ್ಕು ತೋರಿಸುವ ವೇದಿಕೆಯಾಗಿ ಪರಿಣಮಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಭಾಷಣದಲ್ಲಿ ವ್ಯಕ್ತವಾದ ರಾಜಕೀಯ ಸಂದೇಶಗಳು, ಡಿಸಿಸಿ ಬ್ಯಾಂಕ್ ಚುನಾವಣೆಯ ಉಲ್ಲೇಖಗಳು ಹಾಗೂ 2028ರ ಚುನಾವಣೆಯನ್ನು ಕಣ್ಣಿನಲ್ಲಿ ಇಟ್ಟು ಮಾಡಿದ ಹೇಳಿಕೆಗಳು ಮುಂದಿನ ರಾಜಕೀಯ ಸಮೀಕರಣಗಳಿಗೆ ಸುಳಿವು ನೀಡುವಂತಿವೆ.

ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂಬ ಸ್ಪಷ್ಟನೆ ನೀಡಿದರೂ, ಕ್ಷೇತ್ರದಲ್ಲಿ ಸಂಘಟನೆ ಬಲಪಡಿಸುವ ಮತ್ತು ಹೊಸ ರಾಜಕೀಯ ಶಕ್ತಿ ನಿರ್ಮಿಸುವ ಪ್ರಯತ್ನಗಳು ಈಗಿನಿಂದಲೇ ಆರಂಭವಾಗಿವೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹೀಗಾಗಿ, ಈ ಕಾರ್ಯಕ್ರಮವು 2028ರ ಚುನಾವಣೆಗೆ ಮುನ್ನ ರಾಜಕೀಯ ಅಂಗಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಸೋಲಿನ ಸೇಡು ತಿರಿಸಿಕೊಳ್ಳುವ ಮೊದಲ ಹಂತದ ಕಾರ್ಯಕ್ರಮ ಎಂಬ ಚರ್ಚೆಗೆ ಕಾರಣವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...