ರಾಜ್ಯಕ್ಕೆ ಮೂರು ದಿನ ಭಾರಿ ಮಳೆ: ಬೆಳಗಾವಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Date:

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 26ರಂದು ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಭಾಗದ ಮೀನುಗಾರರಿಗೆ ಎಚ್ಚರಿಕೆ
ಅಕ್ಟೋಬರ್‌ 29ರವರೆಗೆ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತ ಮತ್ತು ಕಡಿಮೆ ಒತ್ತಡದ ಪರಿಣಾಮವಾಗಿ ಉತ್ತರ ಕರ್ನಾಟಕದ ಹಲವೆಡೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ನಿರೀಕ್ಷೆಯಿದೆ. ನಾಗರಿಕರು ಹಾಗೂ ಕೃಷಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...