ಹೆಸ್ಕಾಂ ಬಿಲ್‌ ಬಾಕಿ: ಬೆಳಗಾವಿ ಸಬ್ ರಿಜಿಸ್ಟ್ರಾ‌ರ್ ಕಚೇರಿ ಕರೆಂಟ್ ಕಟ್

Date:

ಬೆಳಗಾವಿ ನಗರದ ಡಿಸಿ ಕಚೇರಿ ಆವರಣದಲ್ಲಿ ಇರುವ ಸಬ್‌ ರಿಜಿಸ್ಟ್ರಾರ್ ಕಚೇರಿಗೆ ಹೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಬ್ ರಿಜಿಸ್ಟ್ರಾ‌ರ್ ಕಚೇರಿಯಿಂದ ಒಟ್ಟು ₹2 ಲಕ್ಷ 31 ಸಾವಿರ ರೂಪಾಯಿ ಹೆಸ್ಕಾಂ ಬಿಲ್ ಬಾಕಿ ಉಳಿದಿದೆ. ಬಾಕಿ ಬಿಲ್ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳು ಹಲವು ಬಾರಿ ನೋಟಿಸ್‌ ಹಾಗೂ ಎಚ್ಚರಿಕೆ ನೀಡಿದರೂ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

ವಿದ್ಯುತ್‌ ಸಂಪರ್ಕ ಕಡಿತಗೊಂಡ ಪರಿಣಾಮ ಕಚೇರಿಯ ದಿನನಿತ್ಯದ ಕಾರ್ಯಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ದಾಖಲೆ ನೋಂದಣಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಬಂದ ಸಾರ್ವಜನಿಕರು ಹಾಗೂ ಸಿಬ್ಬಂದಿ ತೀವ್ರ ಪರದಾಟ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಕಚೇರಿಯಲ್ಲೇ ಈ ರೀತಿಯ ನಿರ್ಲಕ್ಷ್ಯ ನಡೆದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ತಕ್ಷಣವೇ ಬಾಕಿ ಬಿಲ್‌ ಪಾವತಿಸಿ ವಿದ್ಯುತ್‌ ಸಂಪರ್ಕ ಪುನರ್‌ಸ್ಥಾಪಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...