ಬೆಳಗಾವಿ | ಪತಿಯ ಕೊಲೆ ಸಂಚು: ಪತ್ನಿ ಹಾಗೂ ಅವಳ ಪ್ರಿಯಕರ ಬಂಧನ, ತನಿಖೆ ಮುಂದುವರಿಕೆ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಾಡಿಕೊಪ್ಪ ಬಳಿಯ ಶಿವನಗೌಡ ಪಾಟೀಲ (47) ಕೊಲೆ ಪ್ರಕರಣದಲ್ಲಿ ಹೊಸ ತಿರುವು ಮೂಡಿದ್ದು, ಈ ಪ್ರಕರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸಂಬಂಧಪಟ್ಟಿದ್ದಾರೆಂದು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಏಪ್ರಿಲ್ 2 ರಂದು ಶಿವನಗೌಡ ಪಾಟೀಲನ ಪತ್ನಿ ಶೈಲಾ ಪಾಟೀಲ ಹಾಗೂ ಅವಳ ಪ್ರಿಯಕರ ರುದ್ರಪ್ಪ ಹೊಸಟ್ಟಿ ಸೇರಿ ಕೊಲೆ ನಡೆಸಿದ್ದಾರೆ. ಆರಂಭದಲ್ಲಿ ಇಬ್ಬರೂ ಊಟ ಮತ್ತು ಮದ್ಯ ಸೇವಿಸಿದ್ದಿದ್ದು, ತಂಪು ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಯತ್ನ ನಡೆದಿದೆ. ಆದರೆ, ವಿಷ ಸೇವಿಸಿದ ಬಳಿಕ ಶಿವನಗೌಡನು ವಾಂತಿ ಮಾಡಿದ್ದರಿಂದ ಯತ್ನ ವಿಫಲವಾಗಿತ್ತು. ಬಳಿಕ ರುದ್ರಪ್ಪ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ” ಎಂದು ವಿವರಿಸಿದರು.

ಶಿವನಗೌಡನ ಸಂಬಂಧಿಯಾಗಿರುವ ರುದ್ರಪ್ಪ, ಲಾರಿ ಚಾಲಕರಾಗಿದ್ದು, ಪಾಟೀಲ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ಈ ವೇಳೆ ಪತ್ನಿ ಶೈಲಾ ಪಾಟೀಲನೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ. ಇಬ್ಬರೂ ನಿರಂತರವಾಗಿ ಫೋನ್‌ ಕಾಲ್ ಹಾಗೂ ವಿಡಿಯೋ ಕಾಲ್‌ ಮೂಲಕ ಸಂಪರ್ಕದಲ್ಲಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪತ್ನಿಯೇ ಪ್ರಿಯಕರ ರುದ್ರಪ್ಪನಿಗೆ ಕೊಲೆ ಮಾಡಲು ಸೂಚನೆ ನೀಡಿದ್ದಳು. ಕೊಲೆಯ ಬಳಿಕ ರುದ್ರಪ್ಪ ಪರಾರಿಯಾಗಿದ್ದ. ಈಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳ ಭಾಗವಿದೆ ಎಂಬ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ” ಎಂದು ಎಸ್‌ಪಿ ಗುಳೇ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...