ಬೆಳಗಾವಿ | ಸೈಬರ್ ವಂಚನೆ: 50 ಲಕ್ಷ ರೂ. ಕಳೆದುಕೊಂಡ ದಂಪತಿ; ಪತ್ನಿಯನ್ನು‌ ಕೊಂದು‌ ವೃದ್ಧ ಆತ್ಮಹತ್ಯೆ

Date:

ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ.

ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈಬರ್ ವಂಚಕರು ದಂಪತಿಗೆ ಬೆದರಿಕೆ ಕರೆ ಮಾಡಿದ್ದು, 50 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡಿದ್ದಾರೆ. ಅಲ್ಲದೆ, ಪದೇ-ಪದೇ ಹಣಕ್ಕಾಗಿ ಬೇಡಿಕೆ ಇಟ್ಟು, ಕಿರುಕುಳ ನೀಡಿದ್ದಾರೆ. ಪರಿಣಾಮ ದಂಪತಿಗಳು ಇಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದೆ.

ಡೆತ್ ನೋಟ್‌ ಬರೆದಿಟ್ಟಿರುವ ಡಯಾಗೋ ಸಂತಾನ್, ” ವ್ಯಕ್ತಿಯೊಬ್ಬರು ನಮಗೆ ಬೆದರಿಕೆ ಹಾಕಿದ್ದಾರೆ. ಸಿಮ್ ಕಾರ್ಡ್ ದುರುಪಯೋಗದ ಹೆಸರಿನಲ್ಲಿ ‘ಡಿಜಿಟಲ್ ಬಂಧನ’ ಮಾಡಲಾಗುತ್ತಿದೆ. ನಮ್ಮ ಬದುಕೇ ದುಸ್ತರವಾಗಿದೆ.ಗೋವಾದಲ್ಲಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿದ್ದೆವು. ಆ ಸಾಲದ ಹಣವನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕು” ಎಂದು ಹೇಳಿದ್ದಾರೆ.

ಡಯಾಗೋ ಅವರು ತಮ್ಮ ಪತ್ನಿಗೆ ವಿಷವುಣಿಸಿ, ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಲೇವಿಯಾನಾ ಅವರ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಡಿಯಾಗೋ ಅವರ ಮೃತದೇಹ ಮನೆಯ ನೀರಿನ ಟ್ಯಾಂಕ್‌ನಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಲೇದ್ ಹೇಳಿದ್ದಾರೆ.

ಮೃತದೇಹಗಳನ್ನು ಕಂಡ ನೆರೆಹೊರೆಯವರು ನಂದಗಡ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಬಂದು,ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...