ಬೆಳಗಾವಿ | ಅಖಂಡ ಹಿಂದೂ ಸಮ್ಮೇಳನ: ಏಳು ಜನರ ವಿರುದ್ಧ ಪ್ರಕರಣ

Date:

ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಜನವರಿ 18ರಂದು ನಡೆದ ಅಖಂಡ ಹಿಂದೂ ಸಮ್ಮೇಳನದ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ವರ್ತನೆ ನಡೆದ ಆರೋಪದ ಹಿನ್ನೆಲೆಯಲ್ಲಿ ಹರ್ಷಿತಾ ಠಾಕೂರ್ ಸೇರಿದಂತೆ ಏಳು ಜನರ ವಿರುದ್ಧ ಮಚ್ಚೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಚ್ಚೆ ನಿವಾಸಿ ಆಬ್ದುಲ್ ಖಾದ‌ರ್ ಮುಜಾವರ ನೀಡಿದ ದೂರಿನ ಮೇರೆಗೆ ತನಿಖೆ ಆರಂಭವಾಗಿದೆ. ಸಮ್ಮೇಳನದ ವೇದಿಕೆಯಲ್ಲಿ ಆರೋಪಿಗಳು ಇನ್ನೊಂದು ಸಮುದಾಯದ ವಿರುದ್ಧ ದ್ವೇಷ ಭರಿತ ಹಾಗೂ ಧಾರ್ಮಿಕ ಭಾವನೆ ಕೆರಳಿಸುವ ಭಾಷಣ ಮಾಡಿ, ಅವಾಚ್ಯ ಪದಗಳ ಬಳಕೆ ಮತ್ತು ಪ್ರಚೋದನಕಾರಿ ಕೈಸನ್ನೆಗಳ ಮೂಲಕ ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳಾಗಿ ಹರ್ಷಿತಾ ಠಾಕೂರ್, ಸುಪ್ರಿತ ಸಿಂಪಿ, ಶ್ರೀಕಾಂತ ಕಾಂಬ್ಳೆ, ಬಿಟ್ಟಪ್ಪಾ ತಾರಿಹಾಳ, ಶಿವಾಜಿ ಷಾಪುರಕರ, ಗಂಗಾರಾಮ ತಾರಿಹಾಳ ಹಾಗೂ ಮಲ್ಲಪ್ಪ ಹೆಸರುಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಷಣ ಮಾಡಿ, ಅವಾಚ್ಯ ಪದಗಳ ಬಳಕೆ ಮತ್ತು ಪ್ರಚೋದನಕಾರಿ ಕೈಸನ್ನೆಗಳ ಮೂಲಕ ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳಾಗಿ ಹರ್ಷಿತಾ ಠಾಕೂರ್, ಸುಪ್ರಿತ ಸಿಂಪಿ, ಶ್ರೀಕಾಂತ ಕಾಂಬ್ಳೆ, ಬಿಟ್ಟಪ್ಪಾ ತಾರಿಹಾಳ, ಶಿವಾಜಿ ಷಾಪುರಕರ, ಗಂಗಾರಾಮ ತಾರಿಹಾಳ ಹಾಗೂ ಮಲ್ಲಪ್ಪ ಹೆಸರುಗಳು ದಾಖಲಾಗಿವೆ.

ಇದಕ್ಕೂ ಮುನ್ನ ಪಿರನಾವಾಡಿಯ ಅನ್ಸಾರಿ ದರ್ಗಾ ಸಮೀಪ ಧಾರ್ಮಿಕವಾಗಿ ಸಂವೇದನಾಶೀಲ ಪ್ರದೇಶದಲ್ಲಿ ಅನುಮತಿ ಇಲ್ಲದೆ ಶೋಭಾಯಾತ್ರೆಯ ಬ್ಯಾನರ್‌ಗಳನ್ನು ಹಾಕಲಾಗಿತ್ತು ಎಂಬ ಆರೋಪವೂ ಇದೆ. ಇದು ಉದ್ವಿಗ್ನತೆ ಹೆಚ್ಚಲು ಕಾರಣವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 173 ಸೇರಿದಂತೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡು, ವಿಡಿಯೋ ದೃಶ್ಯಗಳು, ಬ್ಯಾನ‌ರ್ ಸ್ಥಾಪನೆಯ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮಚ್ಚೆ-ಪಿರನಾವಾಡಿ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...