ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್‌ನ ಕೆಂಪು ಟೋಪಿ ಹಾಕಿ ಅವಮಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ನಗರದ ಹಿಂಡಲಗಾ ರಸ್ತೆಯ ಗಾಂಧಿ ಚೌಕ್‌ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಪ್ರತಿಮೆಯ ಗೌರವಕ್ಕೆ ಧಕ್ಕೆ ತಂದಿದ್ದಾರೆ.
ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ರಾಷ್ಟ್ರಪಿತನ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಬೇಕು ಎಂಬ ಆಗ್ರಹ ಕೇಳಿಬಂದಿದೆ.




