ಹೆಣ್ಣು ಮಗು ಹುಟ್ಟಿದ ಕೋಪಕ್ಕೆ ಮೂರು ದಿನದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮಲಂಗಿ ಗ್ರಾಮದಲ್ಲಿ ಮಂಗಳವಾರ ನಡೆದ ದಾರುಣ ಘಟನೆ ಒಂದು ಗ್ರಾಮವನ್ನು ಬೆಚ್ಚಿಬೀಳಿಸಿದೆ. ಹೆಣ್ಣು ಮಗು ಹುಟ್ಟಿದ ಕೋಪಕ್ಕೆ ತಾಯಿಯೇ ತನ್ನ ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ.

ಅಶ್ವಿನಿ ಹಳಕಟ್ಟಿ (28) ಎಂಬ ತಾಯಿ ಈಗಾಗಲೇ ಮೂರು ಹೆಣ್ಣು ಮಕ್ಕಳನ್ನು ಹೆತ್ತಿದ್ದಳು. ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ಅವಳು ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಗೊಂಡಿದ್ದಳು. ಬಳಿಕ ಮಗುವಿನೊಂದಿಗೆ ತಾಯಿ ಮನೆ ಹಿರೇಮಲಂಗಿಗೆ ಬಂದಿದ್ದಳು.

ಮಂಗಳವಾರ ಬೆಳಗ್ಗೆ ಮನೆಯವರು ಹೊರಗಿದ್ದ ಸಮಯಕ್ಕೆ, ಅಶ್ವಿನಿ ತನ್ನ ಹೆಣ್ಣು ಮಗು ಕತ್ತು ಹಿಸುಕಿ ಕೊಲೆಮಾಡಿ ನಂತರ “ಮಗು ಉಸಿರಾಡುತ್ತಿಲ್ಲ” ಎಂದು ನಾಟಕವಾಡುತ್ತಾ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾಳೆ. ವೈದ್ಯರು ಪರೀಕ್ಷಿಸಿದಾಗ ಕತ್ತು ಒತ್ತಿದ ಪರಿಣಾಮ ಉಸಿರುಗಟ್ಟಿ ಸಾವಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಹಿನ್ನೆಲೆಯಲ್ಲಿ ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಈ ಘಟನೆಯು ದೊಡ್ಡ ಆಘಾತ ಮೂಡಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...