ಫೆ.15ರಂದು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳು ಹಾಗೂ ಮಾಂಸಾಹಾರಿ ಅಂಗಡಿಗಳನ್ನು ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಹಬ್ಬದ ದಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಿಸಿದ ಅಂಗಡಿ ಮಾಲೀಕರು ಸಹಕರಿಸಿ ಅಂಗಡಿಗಳನ್ನು ಬಂದ್ ಮಾಡಬೇಕೆಂದು ಮಹಾನಗರ ಪಾಲಿಕೆ ಮನವಿ ಮಾಡಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಕತ್ತೆ ಕಿರುಬ ದಾಳಿ : ಎರಡು ಮೇಕೆ ಮರಿಗಳು ಸಾವು
ಆದೇಶ ಉಲ್ಲಂಘಿಸಿ ಅಂಗಡಿಗಳನ್ನು ತೆರೆದಿರುವುದು ಕಂಡು ಬಂದಲ್ಲಿ, ಅಂತಹ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ.




