ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಪರಿಗಣಿಸಿ, ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಪ್ರಭಾಕರ ಬಸಪ್ರಭು ಕೋರೆ ಅವರಿಗೆ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ.
ಕೆಎಲ್‌ಇ ಸಂಸ್ಥೆಯ ಮೂಲಕ ವೈದ್ಯಕೀಯ, ಎಂಜಿನಿಯರಿಂಗ್, ತಾಂತ್ರಿಕ ಹಾಗೂ ಸಾಮಾನ್ಯ ಶಿಕ್ಷಣ ಕ್ಷೇತ್ರಗಳಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.
1947ರ ಆಗಸ್ಟ್ 1ರಂದು ಜನಿಸಿದ ಪ್ರಭಾಕರ ಕೋರೆ ಅವರು ಬಿ.ಕಾಂ ಪದವೀಧರರು. ಮೂರು ಬಾರಿ ರಾಜ್ಯಸಭಾ ជជក (1990-1996, 2008-2014, 2014-2020) ಹಾಗೂ 2001ರಿಂದ 2007ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
1984ರಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗುವ ವೇಳೆ 38 ಅಂಗಸಂಸ್ಥೆಗಳಿದ್ದವು. ಅವರ ನೇತೃತ್ವದಲ್ಲಿ ಸಂಸ್ಥೆಗಳ ಸಂಖ್ಯೆ 317ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಅವರು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.
1947ರ ಆಗಸ್ಟ್ 1ರಂದು ಜನಿಸಿದ ಪ್ರಭಾಕರ ಕೋರೆ ಅವರು ಬಿ.ಕಾಂ ಪದವೀಧರರು. ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ (1990-1996, 2008-2014, 2014-2020) ಹಾಗೂ 2001ರಿಂದ 2007ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
1984ರಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗುವ ವೇಳೆ 38 ಅಂಗಸಂಸ್ಥೆಗಳಿದ್ದವು. ಅವರ ನೇತೃತ್ವದಲ್ಲಿ ಸಂಸ್ಥೆಗಳ ಸಂಖ್ಯೆ 317ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಅವರು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.
ಈ ಕುರಿತು ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಕೆಎಲ್‌ಇ ಸಮೂಹ ಹಾಗೂ ರೈತರಿಗೆ ಅರ್ಪಿಸುತ್ತೇನೆ. ಯಾವುದೇ ಪ್ರಶಸ್ತಿಗಾಗಿ ಅಲ್ಲ, ಸಾಮಾಜಿಕ ಸೇವೆಯಾಗಿ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.




