ಯುಪಿಎಸ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ರಾಹುಲ್‌ ಪಾಟೀಲಗೆ 224ನೇ ರ್ಯಾಂಕ್

Date:

ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದ ರಾಹುಲ್‌ ಜಯವಂತ ಪಾಟೀಲ (30) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 224ನೇ ರ್ಯಾಂಕ್ ಪಡೆದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ರಾಹುಲ್‌ ಅವರ ತಂದೆ ಜಯವಂತ ಪಾಟೀಲ ಹಾಗೂ ತಾಯಿ ಸುರೇಖಾ ಪಾಟೀಲ ಕೃಷಿಕರಾಗಿದ್ದು, ಬಡತನದಲ್ಲೇ ಬೆಳೆದು ಕಠಿಣ ಪರಿಶ್ರಮದ ಮೂಲಕ ಈ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಅವರು ಡೆಹರಾಡೂನ್‌ನ ಇಂದಿರಾ ಗಾಂಧಿ ನ್ಯಾಷನಲ್ ಫಾರೆಸ್ಟ್ ಅಕಾಡೆಮಿ (ಐಜಿಎನ್‌ಎಫ್‌ಎ)ಯಲ್ಲಿ ಕಳೆದ ನಾಲ್ಕು ತಿಂಗಳಿಂದ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ತರಬೇತಿ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಅವರು ಯುಪಿಎಸ್‌ಸಿ ಪರೀಕ್ಷೆಯನ್ನು ಒಟ್ಟು ಆರು ಬಾರಿ ಬರೆದಿದ್ದಾರೆ. 2023ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 804ನೇ ರ್ಯಾಂಕ್ ಪಡೆದಿದ್ದರಿಂದ ಭಾರತೀಯ ರೈಲ್ವೆ ಸಂಚಾರ ಸೇವೆಗೆ ಸೇರಿದ್ದರು. ಬಳಿಕ ಅರಣ್ಯ ಸೇವೆಯಲ್ಲಿ 103ನೇ ರ್ಯಾಂಕ್ ಸಿಕ್ಕ ಹಿನ್ನೆಲೆಯಲ್ಲಿ ಭಾರತೀಯ ಅರಣ್ಯ ಸೇವೆಗೆ ಸೇರ್ಪಡೆಯಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಬೆಳಗಾವಿ ನಗರದ ವನಿತಾ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದು, ಕೆಎಲ್‌ಇ ಆರ್‌ಎಲ್‌ಎಸ್‌ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ ಬೆಂಗಳೂರಿನ ಆರ್.ವಿ. ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿಯನ್ನು ಪಡೆದಿದ್ದಾರೆ.

ಬಡ ರೈತ ಕುಟುಂಬದಿಂದ ಬಂದ ರಾಹುಲ್ ಅವರ ಈ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಕಲಕಾಂಬ ಗ್ರಾಮ ಹಾಗೂ ಬೆಳಗಾವಿ ಜಿಲ್ಲೆಗೆ ಹೆಮ್ಮೆ ತಂದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...