ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

Date:

  • ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ
  • 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ ಮತ ಎಣಿಕೆ ಕಾರ್ಯಾರಂಭವಾಗಿದೆ. ಇನ್ನೆನ್ನು ಕೆಲವೇ ಗಂಟೆಗಳಲ್ಲಿ ಅಭ್ಯರ್ಥಿಗಳ ಅಳಿವು-ಉಳಿವಿನ ಬಗ್ಗೆ ಫಲಿತಾಂಶ ಹೊರಬೀಳಲಿದೆ.

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಈ ವೇಳೆ ಮತ ಎಣಿಕಾ ಕೇಂದ್ರದ ಮುಂಭಾಗದಲ್ಲಿ ತಿಂಡಿ ತಿನ್ನಲು ವ್ಯವಸ್ಥೆ ಮಾಡಿದ್ದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆಕ್ರೋಶಗೊಂಡಿದ್ದಾರೆ.

ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹುಕ್ಕೇರಿ, ಅರಬಾವಿ, ಗೋಕಾಕ್, ಯಮಕನಮರಡಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮಾಂತರ, ಖಾನಾಪುರ, ಕಿತ್ತೂರು, ಬೈಲಹೊಂಗಲ, ಸವದತ್ತಿ ಯಲ್ಲಮ್ಮ, ರಾಮದುರ್ಗ ಕ್ಷೇತ್ರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 18 ವಿಧಾನಸಭಾ ಕ್ಷೇತ್ರಗಳಿವೆ. ಇಲ್ಲಿ 2013ರಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿತ್ತು. ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಆರಂಭ: ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರದ ಮತ ಏಣಿಕೆ ಆರ್ ಪಿಡಿ ಕಾಲೇಜಿನಲ್ಲಿ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ.

8 ಗಂಟೆಯಿಂದ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಟಿಂಗ್ ನಡೆಯುತ್ತಿದ್ದು, 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...