ಬೆಳಗಾವಿ | ಸವದತ್ತಿ ಯಲ್ಲಮ್ಮದೇವಿ ಮೊದಲ ಹಂತದ ಹುಂಡಿ ಎಣಿಕೆಯ ಮೊತ್ತ ಎಷ್ಟು ಗೊತ್ತಾ?: ದಾಖಲೆಯ ಕಾಣಿಕೆ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ 3 ದಿನಗಳ ಮೊದಲ ಹಂತದ ಹುಂಡಿ ಎಣಿಕೆಯಲ್ಲಿ 1.99 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ.

ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ ಹುಂಡಿಯಲ್ಲಿ ಸಲ್ಲಿಸಿದ ಕಾಣಿಕೆಯನ್ನು ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ತಹಶೀಲ್ದಾ‌ರ್ ಕಚೇರಿ ಹಾಗೂ ಬ್ಯಾಂಕ್ ಸಿಬ್ಬಂದಿಗಳಿಂದ ಗುರುವಾರ ಎಣಿಕೆ ಮಾಡಲಾಗಿದೆ.

ಜ. 19ರ ಎಣಿಕೆಯಲ್ಲಿ 8.65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 5.05 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಹಾಗೂ 56.82 ಲಕ್ಷ ರೂ. ಮೌಲ್ಯದ ನಗದು, ಜ. 21ರಂದು ರೂ. 3.15 ಲಕ್ಷ ಮೌಲ್ಯದ ಚಿನ್ನ, ರೂ. 1.67 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ರೂ. 72.99 ಲಕ್ಷ ಮೌಲ್ಯದ ನಗದು ಮತ್ತು ಜ. 22ರಂದು ರೂ. 3.33 ಲಕ್ಷ ಮೌಲ್ಯದ ಚಿನ್ನ, ರೂ. 4.77 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ರೂ. 42.83 ಲಕ್ಷ ಮೌಲ್ಯದ ನಗದು ಸೇರಿ ರೂ. 15.10 ಲಕ್ಷ ಮೌಲ್ಯದ ಚಿನ್ನ ಮತ್ತು ರೂ. 11.51 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಹಾಗೂ ರೂ. 1.72 ಕೋಟಿ ಮೌಲ್ಯದ ನಗದು ಒಟ್ಟು ರೂ. 1.99 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? KLE ಚೇರಮನ್ ಸ್ಥಾನದಿಂದ ಹಿಂದೆ ಸರಿದ ಪ್ರಭಾಕರ ಕೋರೆ: 40 ವರ್ಷಗಳ ಸುವರ್ಣಯುಗಕ್ಕೆ ತೆರೆ

ಎಣಿಕೆ ಕಾರ್ಯದಲ್ಲಿ ಅಮಾನ್ಯಗೊಂಡ ದೇಶಿಯ ನೋಟುಗಳು ಹಾಗೂ ಅಮೆರಿಕಾ, ಯುರೋಪ್, ಓಮನ್, ಕೆನಡಾದ ವಿದೇಶಿ ಕರೆನ್ಸಿಗಳು ದೊರೆತಿವೆ. ಅಮಾನ್ಯಗೊಂಡ ಭಾರತೀಯ ರೂ. 1,000 ಮುಖಬೆಲೆಯ 1, ರೂ. 500 ಮುಖಬೆಲೆಯ 1, ರೂ. 2,000 ಮುಖಬೆಲೆಯ 1 ನೋಟುಗಳು ಇದರಲ್ಲಿವೆ. ಜೊತೆಗೆ ಅಮೆರಿಕಾದ 20 ಡಾಲರ್ ಮುಖಬೆಲೆಯ 1, ಯುರೋಪಿನ 10 ಮತ್ತು 5 ಯುರೋ ಮುಖಬೆಲೆಯ ತಲಾ 2, ಒಮನ್ 100 ಬೈಸಾ ಮತ್ತು 1 ರಿಯಾಲ್ ಮುಖಬೆಲೆಯ ತಲಾ 2 ಹಾಗೂ ಕೆನಡಾದ 20 ಡಾಲರ್ ಮುಖಬೆಲೆಯ 5 ನೋಟುಗಳು ಎಣಿಕೆಯಲ್ಲಿ ಶೇಖರಣೆಗೊಂಡಿವೆ ಎಂದು ಪ್ರಾಧಿಕಾರದ ಸಹಕಾರ್ಯದರ್ಶಿ ನಾಗರತ್ನಾ ಚೋಳಿನ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...