ರಾಮದುರ್ಗ ಸವದತ್ತಿ ರೈಲು ಮಾರ್ಗಕ್ಕೆ ಒಗ್ಗಟ್ಟು: ರೈಲ್ವೆ ಹೋರಾಟ ಸಮಿತಿ ಸಭೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಸಮಿತಿಯಿಂದ ರೈಲ್ವೆ ಯೋಜನೆ ಕುರಿತು ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ರೈಲ್ವೆ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕುತುಬುದ್ದಿನ್ ಖಾಜಿ, ರಾಮದುರ್ಗ-ಸವದತ್ತಿ ರೈಲು ಮಾರ್ಗಕ್ಕಾಗಿ ಈಗಾಗಲೇ ಸಚಿವರು ಹಾಗೂ ಸಂಸದರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ಶಾಲಿನಿಯವರು ಮಾತನಾಡಿ, ರಾಮದುರ್ಗಕ್ಕೆ ರೈಲು ಸಂಪರ್ಕ ದೊರೆತರೆ ಆರ್ಥಿಕ ಪ್ರಗತಿ ಸಾಧ್ಯವಾಗುತ್ತದೆ. ಜೊತೆಗೆ ಸವದತ್ತಿಯ ಯಲ್ಲಮ್ಮ ಹಾಗೂ ಶಿರಸಂಗಿಯ ಕಾಳಮ್ಮ ದೇವಸ್ಥಾನಗಳಿರುವುದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಜುಮನ್‌ ಕಮಿಟಿಯ ಶಫಿ ಬೆಣ್ಣೆ ಮಾತನಾಡಿ, ರೈಲ್ವೆ ಯೋಜನೆಗಾಗಿ ನಾವು ಹಾಗೂ ಹೋರಾಟ ಸಮಿತಿಯವರು ಇದುವರೆಗೂ ಸಚಿವರನ್ನು ಭೇಟಿ ಮಾಡಿ ವಿಷಯ ತಿಳಿಸಿದ್ದೇವೆ.

ಈ ಹೋರಾಟದ ಯಶಸ್ಸಿನ ಕ್ರೆಡಿಟ್ ಯಾರೇ ತೆಗೆದುಕೊಂಡರೂ ಪರವಾಗಿಲ್ಲ, ಆದರೆ ರಾಮದುರ್ಗ-ಸವದತ್ತಿ ಮಾರ್ಗದಲ್ಲಿ ರೈಲ್ವೆ ಯೋಜನೆ ಅನುಷ್ಠಾನವಾಗಬೇಕು ಎಂಬುದೇ ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ರಂಗನಗೌಡರ ಮಾತನಾಡಿ, ರೈಲ್ವೆ ಹೋರಾಟಕ್ಕೆ ಕಾಂಗ್ರೆಸ್‌ ಪಕ್ಷ ಹಾಗೂ ಶಾಸಕರ ಸಂಪೂರ್ಣ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.

ಡಿ.ಎಸ್.ಎಸ್ ಸಂಘಟನೆಯ ಬಿ.ಆರ್. ದೊಡ್ಡಮನಿ ಮಾತನಾಡಿ, ರೈಲ್ವೆ ಹೋರಾಟಕ್ಕೆ ದಲಿತ ಸಂಘಟನೆಗಳ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಪ್ರೊ. ಚಿಕ್ಕ ನರಗುಂದ ಅವರು ಮಾತನಾಡಿ, ಈ ಹೋರಾಟದಲ್ಲಿ ಯಾರೂ ಅಮುಖ್ಯರಲ್ಲ, ಯಾರೂ ಅಲ್ಪರಲ್ಲ. ಇದು ರಾಜಕೀಯ, ಧರ್ಮ ಮತ್ತು ಭಾಷೆ ಮೀರಿದ ಜನಪರ ಹೋರಾಟವಾಗಿದೆ ಎಂದು ಹೇಳಿದರು.

ಕಾರ್ಮಿಕ ಸಂಘಟನೆಯ ಗೈಬು ಜೈನೆಖಾನ್‌ ಮಾತನಾಡಿ, ರೈಲ್ವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಎಲ್ಲಾ ಪಕ್ಷಗಳು, ಸಂಘಟನೆಗಳು ಹಾಗೂ ಎಲ್ಲ ಜಾತಿ-ಧರ್ಮದವರು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿರುವುದರಿಂದ ಈ ಹೋರಾಟಕ್ಕೆ ಖಂಡಿತ ಯಶಸ್ಸು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ವಿಜಯ ಸೇನಾ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ಶಿರಸಂಗಿಯಲ್ಲಿ ರೈಲ್ವೆ ಹೋರಾಟ ಸಮಿತಿಯ ಸಭೆ

ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದಲ್ಲಿ ರೈಲ್ವೆ ಹೋರಾಟ ಸಮಿತಿ ಸಭೆ ನಡೆಸಲಾಯಿತು

ಈ ಸಂದರ್ಭದಲ್ಲಿ ಶಿರಸಂಗಿಯ ಗ್ರಾಮ ಪಂಚಾಯತಿಯ ಸದಸ್ಯರು ಊರಿನ ಹಿರಿಯರು ಭಾಗವಹಿಸಿ ರೈಲ್ವೆ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...