ಬೆಳಗಾವಿಯವರೆಗೆ ಸಂಚರಿಸಲಿದೆ ʼವಂದೇ ಭಾರತ್‌’ ರೈಲು

Date:

ಬೆಂಗಳೂರಿನಿಂದ ಧಾರವಾಡವರೆಗೆ ಮಾತ್ರ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲಾಗಿದೆ. ವಂದೇ ಭಾರತ್ ರೈಲು ಮಂಗಳವಾರ ಪ್ರಾಯೋಗಿಕವಾಗಿ ಸಂಚಾರ ನಡೆಸಿದೆ.

ವಂದೇ ಭಾರತ್ ಎ‌ಕ್ಸ್‌ಪ್ರೆಸ್ ಬೆಳಗಾವಿ ನಿಲ್ದಾಣಕ್ಕೆ ಮಧ್ಯಾಹ್ನ 1.30ಕ್ಕೆ ಆಗಮಿಸಿದ ರೈಲು, 2 ಗಂಟೆಗೆ ಹೊರಟಿತು. ಈ ರೈಲು ಬೆಳಗಾವಿ ನಿಲ್ದಾಣ ಪ್ರವೇಶಿಸುತ್ತಿದ್ದಂತೆ, ಬೆಳಗಾವಿ ಭಾಗದ ಜನರು ಸಂತೋಷ ವ್ಯಕ್ತಪಡಿಸಿದರು. ಮೊದಲ ದಿನ ಬೆಳಗಾವಿಗೆ ಆಗಮಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ವೀಕ್ಷಿಸಿದ ರೈಲು ಪ್ರಯಾಣಿಕರು ಬೆಳಗಾವಿಯಿಂದ ಬೆಂಗಳೂರಿಗೆ‌ ಹೊರಡುವ ಸಮಯ ಮತ್ತು ಪ್ರಯಾಣದ ವೆಚ್ಚದ ಮಾಹಿತಿ‌ ಪಡೆದರು.

ಬೆಳಗಾವಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಅನಿಲಕುಮಾರ್‌ ಮಾತನಾಡಿ, “ಈ ರೈಲು ಪ್ರಾಯೋಗಿಕವಾಗಿ ಸಂಚರಿಸಿದೆ. ನಿಯಮಿತವಾಗಿ ಸೇವೆ ಆರಂಭಿಸುವ ದಿನಾಂಕ ಘೋಷಣೆಯಾಗಬೇಕಿದೆ. ಹಾಗಾಗಿ ರೈಲಿನ ಸ್ವಾಗತಕ್ಕಾಗಿ ಇಂದು ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

“ಬೆಂಗಳೂರಿನಿಂದ ಬೆಳಿಗ್ಗೆ 5.45ಕ್ಕೆ ಹೊರಡಲಿರುವ ರೈಲು(ಸಂಖ್ಯೆ 20661) ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ 2ಕ್ಕೆ ಹೊರಡಲಿರುವ ರೈಲು(ಸಂಖ್ಯೆ 20662) ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ” ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲ್ವೆ ಜೋನಲ್‌ ಯೂಸರ್ಸ್‌ ಕನ್ಸಲ್ಟೇಟಿವ್‌ ಕಮಿಟಿ ಸದಸ್ಯ ಪ್ರಸಾದ್ ಕುಲಕರ್ಣಿ ಉಪಸ್ಥಿತರಿದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...