ಬೆಳಗಾವಿ | ತಿಗಡಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಪಿ

Date:

ಬೆಳಗಾವಿ ಜಿಲ್ಲೆಯ ತಿಗಡಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಒಳಗೊಂಡ ಗುಂಪು ತನ್ನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದಾರೆ ಮಹಿಳೆಯೊಬ್ಬರು ಆರೋಪಿಸಿದ್ದರು. ಆದರೆ, ಘಟನೆ ನಡೆದಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ, ಯಾರನ್ನೂ ವಶಕ್ಕೆ ಪಡೆಯಲಾಗಿಲ್ಲ ಎಂದ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ ಗುಳೇದ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2023ರ ನವೆಂಬರ್ 21 ರಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಇದ್ದ ಗುಂಪು ತನ್ನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದೆ ಮತ್ತು ಅನುಚಿತವಾಗಿ ವರ್ತಿಸಿದೆ ಎಂದು ಮಹಿಳೆ ಆರೋಪಿಸಿದ್ದರು. ಡಿಸೆಂಬರ್ 29ರಂದು ಅವರು ನೀಡಿದ ದೂರಿನ ಆಧಾರದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗಿದೆ. ಆದರೆ, ಇಲ್ಲಿಯವರೆಗೆ, ಮಹಿಳೆಯ ಆರೋಪಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

“ತನ್ನ ಮೊಬೈಲ್ ಫೋನ್‌ನಲ್ಲಿರುವ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಆದರೆ, ಸಾಕ್ಷ್ಯವನ್ನು ಮರುಪಡೆಯಲು ಅವರ ಫೋನ್‌ಅನ್ನು ನಮಗೆ ನೀಡಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇಲ್ನೋಟಕ್ಕೆ, ಘಟನೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿರಬಹುದು. ಮಹಿಳೆಯು ಗ್ರಾಮ ಪಂಚಾಯತಿಗೆ ಹೋಗಿ ತನ್ನ ಅಸ್ತಿ ವಿಚಾರವಾಗಿ ದೂರು ದಾಕಲಿಸಿರುವುದಕ್ಕೆ ಬಲವಾದ ಪುರಾವೆಗಳಿವೆ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

“ಗ್ರಾಮ ಪಂಚಾಯತಿ ಕಚೇರಿಯಲ್ಲಿ ಏನಾಯಿತು ಎಂದು ತನಿಖೆ ನಡೆಸುತ್ತಿದ್ದೇವೆ. ನವೆಂಬರ್ 21 ರಂದು ದೂರುದಾರರು ಮತ್ತು ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಾಗ ಮಹಿಳಾ ಅಧಿಕಾರಿಯೊಬ್ಬರು ಕಚೇರಿಯಲ್ಲಿದ್ದರು. ಅಲ್ಲಿ, ದೂರುದಾರರನ್ನು ವಿವಸ್ತ್ರಗೊಳಿಸಲಾಗಿಲ್ಲ ಅಥವಾ ಥಳಿಸಲಾಗಿಲ್ಲ ಎಂದು ಆ ಅಧಿಕಾರಿ ಪೊಲೀಸರಿಗೆ ತಿಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ಹಗಲು ಹೊತ್ತಿನಲ್ಲಿ ಮಹಿಳಾ ಅಧಿಕಾರಿಯ ಎದುರೇ ಇಂತಹ ಘಟನೆ ನಡೆದಿದೆ ಎಂದು ಭಾವಿಸುವುದು ಕಷ್ಟ. ನವೆಂಬರ್ 21ರಂದು ಆಕೆ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ, ಬೈಲಹೊಂಗಲ ಪೊಲೀಸರು ಮಹಿಳೆಯ ವೈದ್ಯಕೀಯ ವರದಿಯನ್ನು ಪಡೆದಿದ್ದಾರೆ. ವರದಿಯ ಪ್ರಕಾರ, ಆಕೆಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ, ಅಂದು ಪೊಲೀಸರು ಆಕೆಯ ಹೇಳಿಕೆ ಪಡೆಯಲು ಹೋದಾಗ ಆಕೆ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...