ಅಶ್ಲೀಲ ಗೀತೆಗಳ ಹಾವಳಿ, ಕಠಿಣ ಕಾನೂನು ಕ್ರಮಕ್ಕೆ ಆಗ್ರಹ: ಉಪವಾಸ ಸತ್ಯಾಗ್ರಹದ ಎಚ್ಚರಿಕೆ

Date:

ರಾಜ್ಯದಲ್ಲಿ ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳು ಹಾಗೂ ದ್ವಂದಾರ್ಥ ಸಂಭಾಷಣೆಗಳನ್ನು ರಚಿಸಿ ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಜಾತ್ರೆ, ಉತ್ಸವ, ಧಾರ್ಮಿಕ ಸಮಾರಂಭಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ‘ಜಾನಪದ ಗೀತೆ’ಗಳೆಂದು ಬಿಂಬಿಸಿ ಮಹಿಳೆಯರು, ಶಾಲಾ ವಿದ್ಯಾರ್ಥಿನಿಯರು ಮತ್ತು ಮಕ್ಕಳ ಘನತೆ-ಗೌರವಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಆರೋಪಿಸಿದ್ದಾರೆ

ಈ ಕುರಿತು ಅವರು ರಾಜ್ಯ ಮಹಿಳಾ ಆಯೋಗ, ರಾಜ್ಯ ಡಿಜಿಪಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದಾರೆ. ಪೋಕ್ಸ ಕಾಯ್ದೆ-2012, ಐ.ಟಿ. ಕಾಯ್ದೆ-2000, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 296 ಸೇರಿದಂತೆ ಸಂಬಂಧಿತ ವಿಧಿಗಳ ಅಡಿಯಲ್ಲಿ ಅಶ್ಲೀಲ ಗೀತೆಗಳ ರಚನಾಕಾರರು, ಹಾಡುಗಾರರು, ಆಯೋಜಕರು ಹಾಗೂ ಹಣ ನೀಡಿ ಹಾಡಿಸುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಜೊತೆಗೆ ಇಂತಹ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಿಂದ ತಕ್ಷಣವೇ ಅಳಿಸಿಹಾಕಿ, ಅನುಮತಿ ಇಲ್ಲದ ಧ್ವನಿವರ್ಧಕ ಬಳಕೆ ಮತ್ತು ಅಕ್ರಮ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.

ಇಂತಹ ಅಶ್ಲೀಲತೆ ಯುವಜನತೆಯನ್ನು ದಾರಿ ತಪ್ಪಿಸಿ ಶಿಕ್ಷಣ, ಸಾಮಾಜಿಕ ಸ್ವಾಸ್ಥ್ಯ ಮತ್ತು ಮಹಿಳೆಯರ ಸುರಕ್ಷತೆಗೆ ಗಂಭೀರ ಧಕ್ಕೆ ತರುತ್ತಿದ್ದು, ಅಧಿಕಾರಿಗಳು ಈವರೆಗೆ ಕ್ರಮ ಕೈಗೊಳ್ಳದಿರುವುದು ಖಂಡನೀಯವಾಗಿದೆ. ಕೂಡಲೇ ಸರ್ಕಾರ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳುವಲ್ಲಿ ವಿಳಂಬವಾದರೆ ಘೋರ ಅನ್ಯಾಯ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀನಿವಾಸಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...