ಬೆಳಗಾವಿ | ವಾಹನ ಕಳವು ಗ್ಯಾಂಗ್ ಬಂಧನ : ₹95.50 ಲಕ್ಷ ಮೌಲ್ಯದ 21 ವಾಹನ ಜಪ್ತಿ

Date:

ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಲ್ಲಿ ವಾಹನ ಕಳವು ಮಾಡುತ್ತಿದ್ದ ಗ್ಯಾಂಗನ್ನು ಬೆಳಗಾವಿ ಜಿಲ್ಲೆಯ ಮಾರಿಹಾಳ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹95.50 ಲಕ್ಷ ಮೌಲ್ಯದ 21 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ವಶಕ್ಕೆ ಪಡೆದ ವಾಹನಗಳು ಮಾರಿಹಾಳ, ತುಮಕೂರು, ನೆಲಮಂಗಲ, ಯಶವಂತಪುರ, ಅರಸಿಕೆರೆ, ದಾವಣಗೆರೆ ಹಾಗೂ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಶಿರೋಳ ಪ್ರದೇಶಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದೆ.

ಮಾರಿಹಾಳ ಠಾಣೆಯ ಸಿಪಿಐ ಐ.ಆರ್. ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ ಹುಲಕುಂದ, ಪಿಎಸ್‌ಐ ಚಂದ್ರಶೇಖರ, ಸಿಸಿಬಿ ವಿಭಾಗದ ಪಿಎಸ್‌ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ರಾಜ್ಯ ಬಜೆಟ್ | ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು ?

ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ ಅವರು ಪೊಲೀಸ್‌ ತಂಡದ ಕಾರ್ಯವನ್ನು ಪ್ರಶಂಸಿಸಿದ್ದಾರೆ. ಗ್ಯಾಂಗ್‌ನ ಇನ್ನೂ ಕೆಲ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...