ದರೋಡೆ ಆಗಿದ್ದು 400 ಕೋಟಿ ಅಲ್ಲ 1000 ಕೋಟಿ ? ವರ್ಷಗಳ ಬಳಿಕ ಬೆಳಕಿಗೆ ಬಂದ ಚೋರ್ಲಾ ಘಾಟ್ ಮಹಾಕಳ್ಳತನ!

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ ವರ್ಷಗಳ ಬಳಿಕ ಬಹಿರಂಗವಾಗಿದ್ದು, ದೂರುದಾರ ಸಂದೀಪ ಹೇಳಿಕೆಯ ಪ್ರಕಾರ ದರೋಡೆ ಆಗಿದ್ದು 400 ಕೋಟಿ ಅಲ್ಲ 1000 ಕೋಟಿ ಎಂದು ವಿಡಿಯೋ ಹೇಳಿಕೆ ನೀಡಿರುವದು ರಾಜ್ಯ ಪೊಲೀಸ್‌ ವಲಯದಲ್ಲಿ ಸಂಚಲನ ಮೂಡಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಬಂಧನವಾಗಿದೆ.

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋ‌ರ್ ಶೇಟ್ ಅವರಿಗೆ ಸೇರಿದ್ದೆಂದು ಹೇಳಲಾಗುತ್ತಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣ ಪ್ರಕರಣದ ತನಿಖೆ ವೇಳೆ ಈ ಭಾರಿ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣದ ಗಂಭೀರತೆಯನ್ನು ಗಮನಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಶೇಷ ತನಿಖಾ ದಳ (SIT) ರಚಿಸಲು ಆದೇಶಿಸಿದ್ದು, ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಪೊಲೀಸರು ಕಂಟೇನರ್‌ಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, “ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ ಈ ಹಂತದಲ್ಲಿ ಪ್ರಕರಣದ ಕುರಿತು ನಮಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ಇನ್ನೂ ಆರಂಭಿಕ ಹಂತದಲ್ಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ ಜಿಲ್ಲಾ ಆಸ್ಪತ್ರೆಯ ‘ಸಖಿ’ ಕೇಂದ್ರಕ್ಕೆ ಕೇಸ್ ವರ್ಕರ್ ನೇಮಕಕ್ಕೆ ಅರ್ಜಿ ಆಹ್ವಾನ

“ಸಂಪೂರ್ಣ ಮಾಹಿತಿ ಲಭ್ಯವಾದ ಬಳಿಕ ಕರ್ನಾಟಕ ಪೊಲೀಸ್‌ ಇಲಾಖೆಯ ಪಾತ್ರ ಹಾಗೂ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಮುಂದಿನ ತನಿಖೆಗಳಲ್ಲಿ ಕರ್ನಾಟಕದ ಸಹಕಾರ ಅಗತ್ಯವಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...