ಚಳಿಗಾಲ ಅಧಿವೇಶನ | ಭದ್ರತೆಗೆ 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

Date:

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ 19 ವರಗೆ 9 ದಿ‌ನಗಳ ಕಾಲ ನಡೆಯಲಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾ ನಗರಿಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿರುವ ಗೃಹ ಇಲಾಖೆ ವಿಧಾನಸೌಧ ಹಾಗೂ ಶಾಸಕ, ಸಚಿವರು, ಅಧಿಕಾರಿಗಳು ವಾಸ್ತವ್ಯ ಹೂಡುವ ಪ್ರದೇಶಗಳಿಗೆ 6 ಸಾವಿರಕ್ಕೂ ಅಧಿಕ  ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಭದ್ರತಾ ಕಾರ್ಯಕ್ಕೆ 6 ಮಂದಿ ಎಸ್ಪಿಗಳು, 10 ಹೆಚ್ಚುವರಿ ಎಸ್ಪಿಗಳು, 38 ಡಿವೈಎಸ್ಪಿಗಳು, 100 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್ ಗಳು, 235 ಮಂದಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳನ್ನು ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಭದ್ರತೆಯ ನಿಗಾ ವಹಿಸಲು 30 ಅತ್ಯಾಧುನಿಕ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

80ಕ್ಕೂ ಪ್ರದೇಶಗಳಲ್ಲಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಅದೇ ರೀತಿ ನಗರದ ಬಂದೋಬಸ್ತ್ ಸಲುವಾಗಿ ರಸ್ತೆ ಬಂದೋಬಸ್ತ್, ಟ್ರಾಫಿಕ್ ಬಂದೋಬಸ್ತ್ ಸೇರಿ 20 ವಲಯಗಳನ್ನು ರಚಿಸಲಾಗಿದೆ. ಪ್ರತಿ ವಲಯಕ್ಕೂ ಓರ್ವ ಮೇಲ್ವಿಚಾರಕ ವೀಕ್ಷಕರನ್ನು ನೇಮಿಸಲಾಗಿದೆ. ಮುಖ್ಯ ವಲಯಗಳಲ್ಲಿ ಓರ್ವ ಎಸ್ಪಿ ರ‍್ಯಾಂಕ್ ಅಧಿಕಾರಿ ಇರುತ್ತಾರೆ. ಸುವರ್ಣ ವಿಧಾನಸೌಧ ವಲಯದಲ್ಲಿ ಒಬ್ಬರು ಎಸ್ಪಿ, ಡಿಎಸ್ಪಿ‌ ಸೇರಿ ಮತ್ತಿತರ ಅಧಿಕಾರಿಗಳು ಇರಲಿದ್ದಾರೆ ಎಂದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತಿಳಿಸಿದ್ದಾರೆ.

“ಇದರ ಜೊತೆಗೆ 35 ಕೆಎಸ್ ಆರ್ ಪಿ ತುಕಡಿಗಳು, 10 ಡಿಆರ್ ಸಿಆರ್, 8 ಕ್ಯುಆರ್ ಟೀಂ, 16 ಎಸಿ ಟೀಂ ಮಂಜೂರು ಆಗಿವೆ. ಬೆಂಗಳೂರಿನಿಂದ 1 ಗರುಡ ವಿಶೇಷ ಕಮಾಂಡೋ ಪಡೆ ಬರುತ್ತಿದೆ.ಸಿಬ್ಬಂದಿಗಾಗಿ 300 ಬಾಡಿ ವೋರ್ನ್ ಕ್ಯಾಮರಾ ತರಿಸಲಾಗುತ್ತಿದೆ. ಇದು ಪ್ರಪಂಚದಲ್ಲಿ ಬಹಳ ಉಪಯುಕ್ತವಾಗಿದೆ. ಏನೆಲ್ಲಾ ನಡೆಯುತ್ತಿದೆ ಎಂಬುದು ತನ್ನಿಂದ ತಾನೇ ವಿಡಿಯೋ ರೆಕಾರ್ಡ್ ಆಗುತ್ತದೆ” ಎಂದು ಹೇಳಿದರು‌.

“ಚಳಿಗಾಲ ಅಧಿವೇಶನದಲ್ಲಿ ಈವರೆಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲು 55 ಅರ್ಜಿಗಳು, 5 ಮನವಿ ಸಲ್ಲಿಸುವ ಬಗ್ಗೆ ಅರ್ಜಿಗಳು ಬಂದಿವೆ. ಯಾವ‌ ಪ್ರತಿಭಟನೆ ಪ್ರಮುಖ ಅಂತಾ ಹೇಳಲು ಆಗುವುದಿಲ್ಲ. ಎಲ್ಲವೂ ಪ್ರಮುಖ ಪ್ರತಿಭಟನೆಗಳೇ ಅಂತಾ ನಾವು ಪರಿಗಣಿಸುತ್ತೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯಬೇಕು” ಎಂದು‌ ಯಡಾ ಮಾರ್ಟಿನ್ ಅಭಿಪ್ರಾಯ ಪಟ್ಟರು.

ಪ್ರತಿಭಟನೆಗೆ ಅವಕಾಶ

“ಪಂಚಮಸಾಲಿ ಸಮುದಾಯದ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ಈಗಾಗಲೇ ಸ್ವಾಮೀಜಿ ಅವರನ್ನು ಸಂಪರ್ಕಿಸಲಾಗಿದೆ. ಟ್ರಾಕ್ಟರ್ ರ‍್ಯಾಲಿ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕದಂತೆ ಮನವಿ ಮಾಡಿಕೊಂಡಿದ್ದೇವೆ. ನಮ್ಮ‌ ಮನವಿಗೆ ಸ್ವಾಮೀಜಿ ಸ್ಪಂದಿಸುವ ವಿಶ್ವಾಸವಿದೆ. ಆದರೂ ನಾವು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ನಿಗದಿತ ಸ್ಥಳದಲ್ಲಿ ಪ್ರತಿಭಟಿಸಿದರೆ ಸಮಸ್ಯೆ ಇಲ್ಲ. ಆದರೆ, ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರೆ ನಾವು ಅವರನ್ನು ತಡೆಯುತ್ತೇವೆ”ಎಂದರು.

“ಈ ಬಾರಿಯ ಅಧಿವೇಶನದಲ್ಲಿ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಸಾರ್ವಜನಿಕರು ಸಹಕಾರ ಕೊಟ್ಟರೆ ಅಧಿವೇಶನ ಸೂಪರ್ ಸಕ್ಸಸ್ ಆಗಲಿದೆ” ಎಂದು ಪೊಲೀಸ್ ಆಯುಕ್ತರು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...