ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

Date:

ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ಅಪ್ರಾಪ್ತನೂ ಸೇರಿದ್ದಾನೆ ಎಂದು ತಿಳಿದುಬಂದಿದೆ.

ವಂಟಮೂರಿಯ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪದ ಕಾರಣ, ಇಬ್ಬರೂ ಊರು ತೊರೆದು ಹೋಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದು ವಿಕೃತಿ ಮೆರೆದಿತ್ತು.

ಪ್ರಕರಣ ಸಂಬಂಧ ಕಾಕತಿ ಪೊಲೀಸ್‌ ಠಾಣೆಯಲ್ಲಿ 13 ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇತ್ತೀಚೆಗೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಮತ್ತಿಬ್ಬರನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...