ಬಳ್ಳಾರಿ | ನ.22, 23ರಂದು 45ನೇ ರಾಜ್ಯ ಮಟ್ಟದ ಕ್ರೀಡಾಕೂಟ

Date:

ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಬಳ್ಳಾರಿ ಹಾಗೂ ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಸಹಯೋಗದೊಂದಿಗೆ ನವೆಂಬರ್ 22, 23ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಬಳ್ಳಾರಿ ಜಿಲ್ಲಾ ಅಧ್ಯಕ್ಷೆ ಶಾಂತಾಬಾಯಿ ಕಟ್ಟಿಮನಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, “ಈ ಕ್ರೀಡಾಕೂಟದಲ್ಲಿ 30 ವರ್ಷದ ವಯಸ್ಸಿನಿಂದ ನೂರು ವರ್ಷ ವಯಸ್ಸಿನ ಕ್ರೀಡಾಪಟುಗಳು ಭಾಗವಹಿಸಬಹುದು. ಐದು ವಿಭಾಗಗಳಲ್ಲಿ ಈ ಕ್ರೀಡಾಕೂಟವನ್ನು ನಡೆಸಲಾಗುತ್ತಿದ್ದು 100 ಮೀಟರ್ ನಿಂದ 500 ಮೀಟರ್ ಓಟದ ಸ್ಪರ್ಧೆಗಳು, ಎಸೆತ ಹಾಗೂ ಜಿಗಿತದ ಸ್ಪರ್ಧೆಗಳು ಇರಲಿವೆ. 65 ವರ್ಷ ವಯಸ್ಸಿನ ಸ್ಪರ್ಧಾಳುಗಳಿಗೆ ಕೆಲವು ಆಟಗಳನ್ನು ನಿಷೇಧಿಸಲಾಗಿದೆ, ವಿಕಲಚೇತನರಿಗೆ ಸಹ ಈ ಕ್ರೀಡಾಕೂಟದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“ಪ್ರತಿಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಯಾಗಿ ಗೆದ್ದವರಿಗೆ ಡಿಸೆಂಬರ್ 13 ಮತ್ತು 14ರಂದು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆಯುವ ದಕ್ಷಿಣ ಭಾರತದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ನ.19ರವರೆಗೆ ಅಗ್ನಿವೀರ್ ನೇಮಕಾತಿ ರ‍್ಯಾಲಿ

“ಕ್ರೀಡಾಕೂಟವನ್ನು ಸುಮಾರು 60 ರಿಂದ 70 ಜನ ತೀರ್ಪುಗಾರರು ಭಾಗವಹಿಸಿ ಯಶಸ್ವಿಗೊಳಿಸಲಿದ್ದಾರೆ. ರಾಜ್ಯ ಮತ್ತು ಜಿಲ್ಲಾ ಘಟಕದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ವೇಣುಗೋಪಾಲ್, ಖಜಾಂಚಿ ಡಿ ಎಸ್ ದೊಡ್ಡಯ್ಯ, ಜನರಲ್ ಸೆಕ್ರೆಟರಿ ನಾಗಭೂಷಣ್, ವಿಜಯ್, ಅಬ್ದುಲ್ ಮುನಾಫ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...