ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 19ರವರೆಗೆ ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ.
ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 2025ರ ಜೂನ್ 30ರಿಂದ ಜುಲೈ 10ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು ವರ್ಗವಾರು ರ‍್ಯಾಲಿಗೆ ಆಹ್ವಾನಿಸಲಾಗಿದೆ.
ಅಗ್ನಿವೀರ್ ಸಾಮಾನ್ಯ ಕರ್ತವ್ಯ (ಅಗ್ನಿವೀರ್ ಸಾಮಾನ್ಯ ಕರ್ತವ್ಯ ವರ್ಗಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು): ಬೆಂಗಳೂರು ಪ್ರಧಾನ ಕಚೇರಿಯ ಆರ್‌ಒ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಹಾಗೂ ವಿಜಯನಗರ.
ಅಗ್ನಿವೀರ ಸಾಮಾನ್ಯ ಡ್ಯೂಟಿ ಹೊರತುಪಡಿಸಿ ಒಂದೇ ವರ್ಗಕ್ಕೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು: (ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸö್ಮನ್ (10ನೇ) ಮತ್ತು ಅಗ್ನಿವೀರ್ (8ನೇ), ಬೆಂಗಳೂರು ಪ್ರಧಾನ ಕಚೇರಿಯ ಆರ್‌ಓ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳು.
ಇದನ್ನೂ ಓದಿ: ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ತಜ್ಞರ ನೇಮಕಕ್ಕೆ ಪ್ರಗತಿಪರರ ಆಗ್ರಹ
ಬಹು ವರ್ಗಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು: ಎಆರ್‌ಒ ಮಂಗಳೂರು ವ್ಯಾಪ್ತಿಯ ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು.ರ‍್ಯಾಲಿ ಎಲ್ಲಾ ಅಗ್ನಿವೀರ ವರ್ಗಗಳ ನೇಮಕಾತಿಗಾಗಿ ಆಯೋಜಿಸಲಾಗಿದೆ ವಯಸ್ಸು, ವಿದ್ಯಾರ್ಹತೆ ಹಾಗೂ ಇತರೆ ಅರ್ಹತಾ ವಿವರಗಳು ಜೆಐಎ ವೆಬ್‌ಸೈಟ್‌ನಲ್ಲಿ 2025ರ ಮಾರ್ಚ್ 12ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ ಇರುತ್ತವೆ.
ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವು www.joinindianarmy.nic.in ನಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರವೇಶಪತ್ರವನ್ನು ಅವರ ನೋಂದಾಯಿತ ಈ-ಮೇಲ್ ಐಡಿಗೆ ಕಳುಹಿಸಲಾಗುತ್ತದೆ. ಜೊತೆಗೆ Join Indian Army ವೆಬ್‌ಸೈಟ್ ನಲ್ಲಿಯೂ ಲಭ್ಯವಿರುತ್ತದೆ.
ಅಭ್ಯರ್ಥಿಗಳು ಯಾವುದೇ ದಲಾಲರು ಅಥವಾ ಮಧ್ಯವರ್ತಿಗಳ ಮೋಸಕ್ಕೆ ಒಳಗಾಗಬಾರದು. ಅಯ್ಕೆ ಸಂಪೂರ್ಣವಾಗಿ ಆನ್‌ಲೈನ್ ಪರೀಕ್ಷೆ ರ‍್ಯಾಲಿ ಸಮಯದಲ್ಲಿ ನಡೆಯುವ ಪರೀಕ್ಷೆಗಳು ಹಾಗೂ ಅಂತಿಮ ಮೆರುಗಿನ ಆಧಾರದ ಮೇಲೆ ಮಾತ್ರ ಆಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.





