ಬಳ್ಳಾರಿ | ಮೇ 20ರಂದು ಅಂಗನವಾಡಿ ನೌಕರರ ಮುಷ್ಕರ

Date:

ಅಂಗನವಾಡಿ ಕಾರ್ಯಕರ್ತರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 20ರಂದು ಬೃಹತ್ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಉಮಾದೇವಿ ಹೇಳಿದರು.

ಬಳ್ಳಾರಿ ನಗರದ ಪತ್ರಿಕಾ ಭವನದಲ್ಲಿ ಸಿಐಟಿಯು ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂಗನವಾಡಿ ನೌಕರರು 50 ವರ್ಷಗಳಿಂದ ಐಸಿಡಿಎಸ್ ಅಡಿಯಲ್ಲಿ ದುಡಿಯುತ್ತಿದ್ದಾರೆ. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಖಾಯಂ ಮಾಡಬೇಕು. ಅಲ್ಲಿವರೆಗೆ ಕನಿಷ್ಠ ವೇತನ ನೀಡಬೇಕು. ಫಲಾನುಭವಿಗಳ ಘಟಕವೆಚ್ಚ ಹೆಚ್ಚಳ ಮಾಡಬೇಕು ಸೇರಿದಂತೆ ಹಲವು ವರ್ಷಗಳಿಂದ ಮೂಲಭೂತ ಬೇಡಿಕೆಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಆದರೆ ಯಾವ ಬೇಡಿಕೆಯೂ ಈಡೇರಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದೇಶದ ಕಾರ್ಪೊರೇಟ್ ಬಂಡವಾಳದಾರರಿಗೆ 1532 ಲಕ್ಷ ಕೋಟಿ ಸಾಲಮನ್ನಾ, 1.97 ಲಕ್ಷ ಕೋಟಿ ಸಬ್ಸಿಡಿಗಳನ್ನು ಉದಾರವಾಗಿ ಕೊಡುವ ಕೇಂದ್ರ‌ ಸರ್ಕಾರ ದೇಶದ ಭವಿಷ್ಯತ್ತನ್ನು ರೂಪಿಸಲು ಪೂರಕವಾಗಿ ಮಾನವ ಸಂಪನ್ಮೂಲದ ಬೆಳವಣಿಗೆಗೆ ದುಡಿಯುತ್ತಿರುವ ಐಸಿಡಿಎಸ್ ಯೋಜನೆ ಹಾಗೂ ಇದರಲ್ಲಿ ದುಡಿಯುವ ಅಂಗನವಾಡಿ ನೌಕರರಿಗೆ ಕೊಡಲು ಹಣವಿಲ್ಲ ಎಂದು ತಾರತಮ್ಯ ಮಾಡುತ್ತಿದೆ. ಇಂತಹ ಧೋರಣೆಗಳ ವಿರುದ್ಧ ಅಂಗನವಾಡಿ ನೌಕರರ ಸಂಘ ಕಟ್ಟಿ ಮುಷ್ಕರಗಳ ಮುಖಾಂತರ ಹೋರಾಟವನ್ನು ನಡೆಸುತ್ತಿದ್ದರೂ, ಈಗ ದೇಶದ 29 ಕಾರ್ಮಿಕರ ಕಾನೂನುಗಳನ್ನು 04 ಸಂಹಿತೆಗಳನ್ನಾಗಿ ಮಾಡುವ ಮುಖಾಂತರ ಸಂಘ ಕಟ್ಟುವ ಹಕ್ಕು, ಮತ್ತು ಮುಷ್ಕರದ ಹಕ್ಕುಗಳಿಗೆ ಹಲವು ರೀತಿಯ ನಿರ್ಬಂಧಗಳನ್ನು ತರುವ ಮೂಲಕ ಸರ್ಕಾರ ಕಾರ್ಮಿಕ ವರ್ಗದವರಿಗೆ ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಇದನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರಕಾರ 2023ರ ಏಪ್ರಿಲ್ 01ರಿಂದ ಗ್ರಾಚ್ಯುಟಿ ಪಾವತಿ ಕಾಯ್ದೆ ಅನ್ವಯಿಸಿ 287 ಕಾರ್ಯಕರ್ತೆಯರಿಗೆ ಹಾಗೂ 1204 ಸಹಾಯಕಿಯರಿಗೆ ಪಾವತಿಸುವುದನ್ನು ಸಂಘಟನೆ ಸ್ವಾಗತಿಸುತ್ತದೆ. ಈ ಕಾಯ್ದೆಯನ್ನು 2011 ರಿಂದ ನಿವೃತ್ತಿಯಾದ 10311 ಕಾರ್ಯಕರ್ತೆಯರು 11980 ಸಹಾಯಕಿಯರಿಗೂ ಅನ್ವಯಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಳ್ಳಾರಿ | ಕಿರುಕುಳದಿಂದ ಬೇಸತ್ತು ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಓರ್ವನ ಬಂಧನ

“ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು. ಐಸಿಡಿಎಸ್ ಯೋಜನೆಯ ಬಜೆಟ್‌ನ್ನು ಹೆಚ್ಚಿಸಬೇಕು. 26000 ಕನಿಷ್ಠ ವೇತನ 10000 ಮಾಸಿಕ ಪಿಂಚಣಿ ಕೊಡಬೇಕು” ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಎ.ಮಲ್ಲಮ್ಮ, ಟಿ.ಎಸ್.ಖಾಸಬನಿ, ಕೆ.ಗೀತಾ, ಸತ್ಯಬಾಬು, ಉಮಾದೇವಿ, ರಾಣಿ, ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...