ಬಳ್ಳಾರಿ | ಕೆಸರು ಗದ್ದೆಯಾದ ಎಪಿಎಂಸಿ ಮೈದಾನ; ರೈತರು-ವ್ಯಾಪಾರಿಗಳ ಪರದಾಟ

Date:

ಬಳ್ಳಾರಿ ನಗರದಲ್ಲಿ ಸುರಿದ ಮಳೆಗೆ ಎಪಿಎಂಸಿ ಮೈದಾನ ಕೆಸರು ಗದ್ದೆಯಂತಾಗಿದೆ. ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದಿರಲಿ, ಓಡಾಡುವುದಕ್ಕೂ ಪರದಾಡುವಂಯಹ ಪರಿಸ್ಥಿತಿ ಎದುರಾಗಿದೆ.

ಎಪಿಎಂಸಿಯಲ್ಲಿ ದಿನನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಸಾವಿರಾರು ಜನರು ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು ನಡೆಸುತ್ತಾರೆ. ಆದರೂ, ಮಾರುಕಟ್ಟೆಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್‌ನಂತರಹ ಸೌಲಭ್ಯಗಳಿಲ್ಲದೆ ಜನರು ಹೈರಾಣುಗುತ್ತಿದ್ದಾರೆ.

ಈ ನಡುವೆ, ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಮಳೆ ನೀರಿನಿಂದ ಮಾರುಕಟ್ಟೆ ಮತ್ತಷ್ಟು ಕೊಚ್ಚೆಯಾಗಿದೆ. ಮಂಗಳವಾರ ವ್ಯಾಪಾರಿಗಳು ಕೆಸರಿನಲ್ಲಿಯೇ ವ್ಯಾಪಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಗ್ರಾಹಕರೂ ಕೂಡ ಅಧಿಕಾರಿಗಳಿಗೆ ಶಪಿಸುತ್ತಾ ಕೊಳ್ಳುವಿಕೆಯಲ್ಲಿ ತೊಡಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರುಕಟ್ಟೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಕೂಡಲೇ ಮಾರುಕಟ್ಟೆಯ ಸಮಸ್ಯೆಗಳನ್ನು ಪರಿಹರಿಸಬೇಕು. ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಸ್ಯೆ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮುಖಂಡ ಕೃಷ್ಣಪ್ಪ, “ನಗರದ ಎಪಿಎಂಸಿ ಅವ್ಯವಸ್ಥೆಯ ತಾಣವಾಗಿದೆ. ಮಳೆ ಬಂದಾಗ ಕೆಸರು ಗದ್ದೆಯಂತಾಗುತ್ತದೆ. ಸ್ವಚ್ಛತೆಯಿಲ್ಲದೆ ದುರ್ವಾಸನೆ ಬೀರಿ ಒಳಗೆ ಬರುವವರು ಮೂಗು ಮುಚ್ಚಿಕೊಂಡು ಬರುವ ಸ್ಥಿತಿಯಿದೆ. ಇದರ ಬಗ್ಗೆ ಈ ಹಿಂದೆಯೇ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಹಾಗೂ ಎಪಿಎಂಸಿ ಅಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಂಡು ಬಂದಿಲ್ಲ” ಎಂದು ಕಿಡಿಕಾರಿದ್ದಾರೆ.

ಮಾರುಕಟ್ಟೆ ಸಮಸ್ಯೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಬಳ್ಳಾರಿ ಮಹಾನಗರ ಪಾಲಿಕೆ ಅಧಿಕಾರಿ ನಂಜುಂಡ ಸ್ವಾಮಿ, “ಸಮಸ್ಯೆಗಳ ಬಗ್ಗೆ ನಾವು ಗಮನಿಸಿದ್ದೇವೆ. ದುರಸ್ತಿ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ಸಿಸಿ ರಸ್ತೆ ಹಾಕಲಾಗುವುದು. ಇನ್ನೆರಡು ವಾರಗಳಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...