ಬಳ್ಳಾರಿ | ಫ್ಲೆಕ್ಸ್, ಬ್ಯಾನರ್, ಪ್ರಿಂಟರ್ಸ್ ಮೇಲೆ ದಾಳಿ; ಪಾಲಿಕೆ ಆರೋಗ್ಯ ಅಧಿಕಾರಿಗಳಿಂದ ಎಚ್ಚರಿಕೆ

Date:

ಬಳ್ಳಾರಿ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರಿಂಟ್ ಮಾಡಿದರೂ, ಫ್ಲೆಕ್ಸ್ ಬ್ಯಾನರ್‌ಗಳನ್ನು ಕಟ್ಟಿದವರ ಮೇಲೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರ ನಿರ್ದೇಶನದ ಮೇರೆಗೆ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡ ನಗರದಲ್ಲಿರುವ ಆರು ಫ್ಲೆಕ್ಸ್ ಬ್ಯಾನರ್ ಪ್ರಿಂಟರ್ಸ್ ಮೇಲೆ ದಾಳಿ ನಡೆಸಿ ಅಂದಾಜು ನೂರು ಕೆಜಿಯಷ್ಟು ಫ್ಲೆಕ್ಸ್ ಪ್ರಿಂಟಿಂಗ್ ಶೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

“ಮಹಾನಗರ ಪಾಲಿಕೆ ಆಯುಕ್ತ ಖಲೀಲ್ ಸಾಬ್ ಅವರ ನೇತೃತ್ವದಲ್ಲಿ ಫ್ಲೆಕ್ಸ್ ಬ್ಯಾನರ್ ಪ್ರಿಂಟರ್ಸ್ ಮಾಲೀಕರೊಂದಿಗೆ ಸಭೆ ನಡೆಸಿ ಮುಂದಿನ ದಿನಗಳಲ್ಲಿ ನಿಷೇಧಿಸಿದ ಬ್ಯಾನರ್ ಪ್ರಿಂಟಿಂಗ್ ನಿಲ್ಲಿಸದಿದ್ದಲ್ಲಿ ದಂಡ ವಿಧಿಸಿ ಟ್ರೇಡ್ ಲೈಸನ್ಸ್ ಕ್ಯಾನ್ಸಲ್ ಮಾಡಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಎಲ್ಲೆಂದರಲ್ಲಿ 70ರಿಂದ 80ಕಡೆ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನೂ ಕೂಡ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಅರಿವು ಮೂಡಿಸಿ ನಂತರ ಕಾನೂನು ಕ್ರಮಕ್ಕೆ ಮುಂದಾಗಿ, ಸುಧೀರ್ ಕುಮಾರ್ ಮುರೊಳ್ಳಿ

“ನಗರದಲ್ಲಿ ಇತ್ತೀಚೆಗೆ ಫ್ಲೆಕ್ಸ್ ಬ್ಯಾನರ್‌ಗಳ ಹಾವಳಿ ಹೆಚ್ಚಾಗಿದ್ದು, ತಡವಾಗಿ ಆದರೂ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ನಗರದಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ” ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...