ಬಳ್ಳಾರಿ | ಎಟಿಎಂ ಯಂತ್ರ ಜಜ್ಜಿ ಹಣ ದರೋಡೆಗೆ ಯತ್ನ; ಇಬ್ಬರ ಬಂಧನ

Date:

ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿನ ಎಸ್‍ಬಿಐ ಬ್ಯಾಂಕ್‍ ಎಟಿಎಂ ಮಷಿನ್ ಗ್ಲಾಸ್‍ನ ವಾಲ್, ಎರಡು ಸಿಸಿ ಟಿವಿ ಕ್ಯಾಮರಾಗಳ ಇನ್‍ಹೋಲ್ ಹಾಗೂ ಲಾಬಿ ಕ್ಯಾಮರಾಗಳನ್ನು ಹೊಡೆದು ಎಟಿಎಂ ಯಂತ್ರದಲ್ಲಿರುವ ಹಣವನ್ನು ಕಳ್ಳತನ ಮಾಡಲು ಯತ್ನಿಸಿದ್ದ ಇಬ್ಬರು ಯುವಕರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭರಾಣಿ ವಿ ಜೆ ತಿಳಿಸಿದರು.

ಸುದ್ಧಿ ಗೋಷ್ಠಿಯನ್ನು ನಡೆಸಿ ಮಾತನಾಡಿ, “ಜುಲೈ 31ರ ರಾತ್ರಿ ಜೆ. ಅವಿನಾಶ್ (27) ಮತ್ತು ಕೆ ಜಿ ಶಿವರಾಜ್ (29) ಇಟ್ಟಿಗೆಗಳಿಂದ ಎಟಿಎಂ ಮಷಿನ್‍ನ ಗ್ಲಾಸ್ ವಾಲ್ ಧ್ವಂಸ ಮಾಡಿದ್ದು ಅಲ್ಲದೇ, ಕ್ಯಾಮೆರಾ ಹಾಗೂ ಎಟಿಎಂ ಯಂತ್ರವನ್ನು ಹೊಡೆದು ಹಾಳು ಮಾಡಿರುತ್ತಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಬಳ್ಳಾರಿ ಡಿಎಸ್‍ಪಿ ನಂದರೆಡ್ಡಿ ಮತ್ತು ಸಿರುಗುಪ್ಪ ಉಪ ವಿಭಾಗದ ಡಿಎಸ್‍ಪಿ ಡಾ. ಸಂತೋಷ ಚವ್ಹಾಣ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ, ತನಿಖೆಯನ್ನು ನಡೆಸಲಾಗಿತ್ತು.

ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ಕೇವಲ 30 ತಾಸುಗಳೊಳಗಾಗಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ವಾಹನ, ಆಯುಧವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಎಐಕೆಕೆಎಂಎಸ್ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ. ರವಿಕುಮಾರ್ ಮತ್ತು ಸಿರುಗುಪ್ಪ ಉಪ ವಿಭಾಗದ ಡಿಎಸ್‍ಪಿ ಡಾ. ಸಂತೋಷ ಚವ್ಹಾಣ್ ಸೇರಿದಂತೆ ಕೌಲ್ ಬಜಾರ್ ಸರ್ಕಲ್ ಇನ್ಸ್ಪೆಕ್ಟರ್ ಸುಭಾಷ್, ಗ್ರಾಮೀಣ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...