ಬಳ್ಳಾರಿ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Date:

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಳ್ಳಾರಿ ನಗರದ ತಾಲೂಕು ಕಚೇರಿಯ ಬಳಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ವಿಶ್ವನಾಥ ಅವರ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಪಕ್ಷದಿಂದ ಮನವಿ ಪತ್ರ ಸಲ್ಲಿಸಲಾಯಿತು.

ಬಿಜೆಪಿ ತಾಲೂಕಾಧ್ಯಕ್ಷ ಹೆಚ್.ಎಮ್.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಸಚಿನ್ ಪಾಂಚಾಳ್ ಅವರ ಡೆತ್‌ ನೋಟಿನಲ್ಲಿ ಉಲ್ಲೇಖಿತವಾದಂತೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ಬಸ್ಸು ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಎಮ್. ಎಸ್.ಸೋಮಲಿಂಗಪ್ಪ ಅವರು ಮಾತನಾಡಿ, ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಗ್ಯಾರಂಟಿ ನೀಡಿ ಪುರುಷರ ಜೇಬಿಗೆ ಕತ್ತರಿ ಹಾಕುವ ಕೆಲಸ ಸರ್ಕಾರ ಮಾಡುತ್ತಿದೆ. ತಾಲೂಕಿನಲ್ಲಿ ತಹಶೀಲ್ದಾರ್ ಕಛೇರಿ, ಸಬ್‌ ರಿಜಿಸ್ಟ್ರಾರ್, ಅಬಕಾರಿ ಮತ್ತು ಪೊಲೀಸ್ ಇಲಾಖೆಗಳಲ್ಲಿ ನಡೆಯುವ ಆನೈತಿಕ ದಂಧೆಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಈ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದವರ ಮೇಲೆ ಪೊಲೀಸ್ ಇಲಾಖೆಯ ಮೂಲಕ ಭಯದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಇಲ್ಲಿ ಹೇಳುವವರು ಕೇಳುವವರು ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಯುವ ಮುಖಂಡರಾದ ಟಿ.ಧರಪ್ಪ ನಾಯಕ ಮಾತನಾಡಿ, ಗ್ಯಾರಂಟಿ ಭಾಗ್ಯಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ತಾಲೂಕಿನಲ್ಲಿ ಪಡಿತರ ಮಾಫಿಯಾ, ಮಟ್ಕಾ, ಇನ್ನಿತರ ಅನೈತಿಕ ಚಟುವಟಿಕೆಗಳು ಇನ್ನಿತರ ದಂಧೆಗಳು ಎಗ್ಗಿಲ್ಲದಂತೆ ನಡೆಯುತ್ತಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಕಾರ್ಯವೈಖರಿಯನ್ನು ಪ್ರಶ್ನಿಸಿದರಲ್ಲದೇ ಅವರು ಶಾಮೀಲಾಗಿರುವ ಬಗ್ಗೆ ಆರೋಪಿಸಿದರು.

ಇದನ್ನು ಓದಿದ್ದೀರಾ? ಮನೆಗೊಂದು ಕಲಾಕೃತಿ ಇರಲಿ: 22ನೇ ‘ಚಿತ್ರಸಂತೆ’ಗೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ

ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಮ್.ಎಸ್.ಸಿದ್ದಪ್ಪ ಮಾತನಾಡಿ, ಸರ್ಕಾರ ಗ್ಯಾರಂಟಿ ಅನುಷ್ಟಾನಕ್ಕಾಗಿ ಜನಸಾಮಾನ್ಯರಿಗೆ ಬಸ್ ದರ, ಸ್ಟಾಂಪ್ ದರ ಇನ್ನಿತರ ಬೆಲೆಯೇರಿಕೆಯ ಮೂಲಕ ಕಸಿಯುತ್ತಿದ್ದಾರೆ ಎಂದರು. ಇದೇ ವೇಳೆ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...