ಬಳ್ಳಾರಿ | ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನ; ಬಿಜೆಪಿಗರ ವಿಧಾನ ಪರಿಷತ್‌ ಸದಸ್ಯತ್ವ ವಜಾಕ್ಕೆ ಎ ಮಾನಸಯ್ಯ ಅಗ್ರಹ

Date:

ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ಚಿತಾವಣೆಯಿಂದ ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಪ್ರಿಯಾಂಕ್ ಖರ್ಗೆರವರನ್ನು ವೈಯಕ್ತಿಕವಾಗಿ ಅವಹೇಳನ ಮಾಡಿರುವುದು ತೀವ್ರ ಖಂಡನೀಯ. ಈ ಕೂಡಲೇ ಇಬ್ಬರನ್ನೂ ವಿಧಾನ ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು ಎಂದು ಡಿಎಸ್‌ಎಸ್ ಮುಖಂಡ ಎ ಮಾನಸಯ್ಯ ಆಗ್ರಹಿಸಿದರು.

ಬಳ್ಳಾರಿ ನಗರದಲ್ಲಿ ಜಿಲ್ಲಾಡಳಿತ ಕಚೇರಿ ಎದುರು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ದಲಿತ, ಹಿಂದುಳಿದ, ಅಲ್ಪಸಂಖ್ಯಾತ ನಾಯಕರ ಏಳಿಗೆಯನ್ನು ಸಹಿಸದ ಬಿಜೆಪಿಗರ ದಲಿತ ವಿರೋಧಿ ನೀತಿ ಖಂಡನಿಯ. ಪ್ರಸ್ತುತ ಕರ್ನಾಟಕದ ರಾಜಕಾರಣದಲ್ಲಿ ಸಂವಿಧಾನಬದ್ಧ ಪ್ರಗತಿಪರ ಚಿಂತನೆ ಮಾಡುತ್ತ ಸಮಾಜಪರ, ಜನಪರ, ಜೀವಪರ ಚಿಂತನೆಯುಳ್ಳ ಸ್ವಾಭಿಮಾನಿ ಪ್ರಿಯಾಂಕ್ ಖರ್ಗೆಯವರು ಮನುವಾದಿ ಬಿಜೆಪಿ, ಆರ್‌ಎಸ್‌ಎಸ್‌, ಕೋಮುವಾದಿ ಸಂಘ ಪರಿವಾರದವರನ್ನು ವಿಧಾನಸೌಧದ ಒಳಗೆ ಹಾಗೂ ಹೊರಗೆ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಖರ್ಗೆಯವರು ಸಾರ್ವಜನಿಕವಾಗಿ ಕೇಳಿರುವ ಸಂವಿಧಾನಬದ್ಧವಾದ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರ ನೀಡುವ ನೈತಿಕತೆ ಇಲ್ಲದ ಮನುವಾದಿಗಳು ವೈಯಕ್ತಿಕ ನಿಂದನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಳ್ಳಾರಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 1

“ಖರ್ಗೆರವರ ದಿಟ್ಟತನದೆದುರು ಸೋತಿರುವ ಮನುವಾದಿಗಳು ಸೋಲನ್ನು ಮುಚ್ಚಿಕೊಳ್ಳುವ ಸಲುವಾಗಿ ಮನುವಾದಿ ಬಿಜೆಪಿ, ಆರ್‌ಎಸ್‌ಎಸ್, ಸಂಘ ಪರಿವಾರಕ್ಕೆ ತಮ್ಮ ಸ್ವಾಭಿಮಾನವನ್ನು ಅಡವಿಟ್ಟು, ಮಾನಸಿಕ ಗುಲಾಮಗಾರಿಕೆಗೆ ಒಳಗಾಗಿ ಸ್ವಾರ್ಥಕ್ಕಾಗಿ ಜೀತ ಮಾಡುತ್ತಿರುವ ಅಂಬೇಡ್ಕರ್ ವಿರೋಧಿ ಅನೇಕ ದಲಿತ ಮನುವಾದಿಗಳಲ್ಲಿ ಒಬ್ಬರಾಗಿರುವ ಅಂಬೇಡ್ಕರ್ ದ್ರೋಹಿ, ದಲಿತ ಸಮುದಾಯ ವಂಚಕ ಛಲವಾದಿ ಅಲ್ಲ, ಮನುವಾದಿ ನಾರಾಯಣಸ್ವಾಮಿಯಿಂದ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಹೇಳಿಕೆಗಳನ್ನು ಕೊಡಿಸುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಹಲವು ಬೇಡಿಕೆ ಈಡೇರಿಕೆಗೆ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ

ಛಲವಾದಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ಸಿ ನರಸಪ್ಪ ಮಾತನಾಡಿ, “ವಿರೋಧ ಪಕ್ಷದ ನಾಯಕರೆನಿಸಿಕೊಂಡಿರುವ ನಾರಾಯಣಸ್ವಾಮಿ ಸಂವಿಧಾನಬದ್ಧ ಹುದ್ದೆಗೆ ಚ್ಯುತಿ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಆ ಹುದ್ದೆಯ ಘನತೆಗೆ ಧಕ್ಕೆ ತಂದಿರುವ ಕಾರಣ ವಿಧಾನ ಪರಿಷತ್ ಸದಸ್ಯತ್ವದಿಂದ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅವರನ್ನು ಈ ಕೂಡಲೇ ವಜಾಗೊಳಿಸಬೇಕು. ಕಲಬುರಗಿಯ ದಕ್ಷ ಜಿಲ್ಲಾಧಿಕಾರಿಗೆ ಅವಮಾನಕರ ಹೇಳಿಕೆ ನೀಡಿರುವ ರವಿಕುಮಾರ್‌ಗೆ ರಾಜ್ಯ ಉಚ್ಚ ನ್ಯಾಯಾಲಯ ಕ್ಷಮೆಯಾಚಿಸುವಂತೆ ತಾಕೀತು ಮಾಡಿದೆ. ಆತನನ್ನು ವಿಧಾನ ಪರಿಷತ್‌ ಸದಸ್ಯ ಸ್ಥಾನದಿಂದ ವಜಾಗೊಳಿಸಿ” ಎಂದು ಆಗ್ರಹಿಸಿದರು.

ಹೆಚ್ ಆಂಜನೇಯ, ಮಲ್ಲಯ್ಯ ಕೊಳಗಲ್, ಬಿ ರಮೇಶ್, ಹೆಚ್ ಶಂಕರ್, ಮಹೇಶ್ ಬತ್ರಿ, ಎರಿಸ್ವಾಮಿ ಹಲುಕುಂದಿ, ಬಳ್ಳಾರಿ, ಹೆಚ್ ದೊಡ್ಡಬಸಪ್ಪ, ಸಿರುಗುಪ್ಪ, ಜಗದೀಶ್ ಕುಮಾರ್, ಕಂಪ್ಲಿ, ಮಾರೆಪ್ಪ ಕುರುಗೋಡು, ಎಸ್ ಕೆಂಚಪ್ಪ, ಜಿ ಪಂಪಾಪತಿ, ಮಹೇಶ್ ಇಂದಿರಾ ನಗರ, ಟಿ.ಎಂ ಎರಿಸ್ವಾಮಿ, ಹುಲುಗಪ್ಪ ಬೆಳಗಲ್ಲು, ಗಂಗಾಧರ ವೇಣಿವೀರಾಪುರ, ಎಂ ಎಸ್ ಭೀಮಶಂಕರ್, ಸೂರಿ, ಪರಶುರಾಮ, ಸಿದ್ದಾರ್ಥಕಾಲೋನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...