ಬಳ್ಳಾರಿ | ಉದ್ಯೋಗ ನೀಡದೆ ವಂಚಿಸುತ್ತಿರುವ ಜೆಎಸ್‌ಡಬ್ಲ್ಯೂ ಕಂಪನಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

Date:

ರಸ್ತೆಗಾಗಿ ಜಮೀನು ಪಡೆದುಕೊಂಡ ಜೆಎಸ್‌ಡಬ್ಲ್ಯೂ ಕಂಪನಿಯು ಜಮೀನು ಕೊಟ್ಟವರಿಗೆ ಉದ್ಯೋಗ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿ ಕುಡುತಿನಿ ಗ್ರಾಮದ ಭೂಸಂತ್ರಸ್ತ ರೈತರು ಕಂಪನಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.

“ಯಾವುದೇ ಕೈಗಾರಿಕೆ ಅಥವಾ ಕಾರ್ಖಾನೆ ಸ್ಥಾಪನೆಯ ಸಂದರ್ಭದಲ್ಲಿ ಜಮೀನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಮಾಲಿಕರಿಗೆ ಪರಿಹಾರ ಮತ್ತು ಉದ್ಯೋಗ ನೀಡಬೇಕೆಂಬ ನಿಯಮವಿದೆ. ಆದರೆ ಈ ಜೆಎಸ್‌ಡಬ್ಲ್ಯೂ ಕಾರ್ಖಾನೆ ನಮ್ಮ ಜಮೀನನ್ನು ರಸ್ತೆಗಾಗಿ ವಶಪಡಿಸಿಕೊಂಡು ಇಂದಿಗೆ ಸುಮಾರು ಐದು ವರ್ಷಗಳಾಗಿವೆ. ನಮ್ಮ ಜಮೀನಿಗೆ ಕೇವಲ ಪರಿಹಾರವನ್ನು ಮಾತ್ರ ನೀಡಿರುವ ಕಂಪನಿಯು ನಮ್ಮ ಕುಟುಂಬಕ್ಕೆ ಉದ್ಯೋಗ ನೀಡದೇ ವಂಚನೆ ಮಾಡುತ್ತಾ ಬರುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕೆಂದು” ಒತ್ತಾಯಿಸಿ ಇಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.

ದೂರು ಸಲ್ಲಿಸಿ ಮಾತನಾಡಿದ ಜಮೀನು ಕಳೆದುಕೊಂಡ ರೈತನ ಮಗ ಸಿ ಆನಂದ್ ಕುಮಾರ್, “ಜೆಎಸ್‌ಡಬ್ಲ್ಯೂ ಕಾರ್ಖಾನೆ ನಮ್ಮ ಜಮೀನನ್ನು ವಶಪಡಿಸಿಕೊಂಡಿದ್ದು, ನಮ್ಮ ಕುಟುಂಬಕ್ಕೆ ಕೈಗಾರಿಕಾ ಕಾನೂನು ಪ್ರಕಾರ ಒಂದು ಉದ್ಯೋಗವನ್ನು ನೀಡಬೇಕಾಗಿರುತ್ತದೆ. ಆ ಉದ್ಯೋಗಕ್ಕಾಗಿ ನಾವು ಅಲೆದು ಅಲೆದು ಸಾಕಾಗಿ ಹೋಗಿ ಮೇಲ್ಕಂಡ 10 ಕುಟುಂಬಗಳ ರೈತರ ಮನೆಗೆ ಒಂದರಂತೆ 10 ಉದ್ಯೋಗ ಕೊಡಿಸಬೇಕೆಂದು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೆವು. ದೂರಿನನ್ವಯ ಜಿಲ್ಲಾಧಿಕಾರಿಗಳು ಜಿಂದಾಲ್ ಕಾರ್ಖಾನೆಗೆ ಉದ್ಯೋಗ ನೀಡುವಂತೆ ಪತ್ರವನ್ನು ಸಹ ಬರೆದಿರುತ್ತಾರೆ. ಈ ಪತ್ರಕ್ಕೆ ಕ್ಯಾರೆ ಎನ್ನದ ಜೆಎಸ್‌ಡಬ್ಲ್ಯೂ ಅಧಿಕಾರಿಗಳು ಇಂದಿಗೂ ಉದ್ಯೋಗ ನೀಡದೆ, ಆಗ ಈಗ ಎಂದು ವಂಚಿಸುತ್ತಾ ಬರುತ್ತಿದ್ದಾರೆ. ಇದರಿಂದ ಕುಟುಂಬ ನಡೆಸುವುದು ಬಹಳ ದುಃಸ್ತರವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಜೆಎಸ್‌ಡಬ್ಲ್ಯೂ ಕಾರ್ಖಾನೆ ದುರಂತ; ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯ

ಇದಕ್ಕೂ ಮುನ್ನ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಜಿಂದಾಲ್ ಕಾರ್ಖಾನೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಈ ದೂರಿನನ್ವಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಮಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದು, ನ್ಯಾಯ ಕೊಡಿಸುವಂತೆ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತೇವೆ. ಆಗ ಎಫ್ಐರ್ ಕೂಡ ದಾಖಲಾಗಿರುತ್ತದೆ. ಇದಾಗಿ ಹಲವು ದಿನ ಕಳೆದರೂ ಇಲ್ಲಿಯವರೆಗೆ ಪೊಲೀಸರು ಜಿಂದಾಲ್ ಅಧಿಕಾರಿಗಳನ್ನು ಬಂಧಿಸಿರುವುದಿಲ್ಲ, ಮತ್ತು ಎಫ್ ಐ ಆರ್ ಆದ ಅಧಿಕಾರಿಗಳು ಬೇಲ್ ತೆಗೆದುಕೊಳ್ಳದೆ ರಾಜಾರೋಷವಾಗಿ ಸಮಾಜದಲ್ಲಿ ತಿರುಗಾಡುತ್ತಿದ್ದಾರೆ. ಅಲ್ಲದೆ ಒಂದು ತಿಂಗಳ ಒಳಗೆ ಎಫ್ ಐ ಆರ್ ದಾಖಲಾದ ವ್ಯಕ್ತಿಗಳಿಗೆ ಬಿ ರಿಪೋರ್ಟ್ ಹಾಕಿ ಮೊಕದ್ದಮೆಯನ್ನು ಮುಕ್ತಾಯಗೊಳಿಸಿರುತ್ತಾರೆ. ಇದು ದಲಿತರನ್ನು ಕಡೆಗಣಿಸುವ ಪೊಲೀಸರ ದೌರ್ಜನ್ಯವೇ ಸರಿ. ಆದ್ದರಿಂದ ಈ ವಿಷಯದ ಬಗ್ಗೆ ದೂರ ದಾಖಲಿಸಿಕೊಂಡು ನ್ಯಾಯ ಕೊಡಿಸಬೇಕೆಂದು ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರಿಗೆ ಮನವಿ ಸಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...