ಬಳ್ಳಾರಿ | ಬಿಸಿಯೂಟ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ; ಮಹಿಳೆಗೆ ಗಾಯ

Date:

ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

‌ಈ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಒಲೆಯ ಮೇಲೆ ತೊಗರಿಬೇಳೆ ಬೇಯಿಸಲು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿದೆ. ಈ ವೇಳೆ ಅಡುಗೆ ಮಾಡುತ್ತಿದ್ದ ಲೋಕಮ್ಮಗೆ ಗಾಯವಾಗಿದ್ದು, ಅದೇ ಕೊಠಡಿಯಲ್ಲಿದ್ದ ಮೂವರು ಮಹಿಳೆಯರು ಪಾರಾಗಿದ್ದಾರೆ.

ಇನ್ನು ಇದೇ ನವೆಂಬರ್ 02ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಶಿಕ್ಷಕರು ಸೇರಿದಂತೆ, ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇಂತಹುದೇ ಘಟನೆ ಇದೀಗ ಕಂಪ್ಲಿ ತಾಲೂಕಿನ ಸರ್ಕಾರಿ ಶಾಲೆಯಲ್ಲೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ತೆಲಂಗಾಣದಲ್ಲಿ ಸಿಲಿಂಡರ್ ಸ್ಪೋಟಗೊಂಡು  ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಕಾರ್ಮಿಕ ಅಭಿ ಎನ್ನುವವರಿಗೆ ಚಿಕಿತ್ಸೆ ಕೊಡಿಸದೆ ಬೇಕರಿ ಮಾಲೀಕ ಅಮಾನವೀಯತೆ ತೋರಿದ್ದ ಘಟನೆ ನಡೆದಿತ್ತು. ಹಾಲ್ತೋರೆ ಗ್ರಾಮದ ನಿವಾಸಿಯಾದ ಪ್ರತಾಪ್‌ಗೌಡ, ಮಾಲೀಕತ್ವದ ಬೇಕರಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದ. ಜೂನ್ 02ರಂದು ಬೇಕರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಭಿಗೆ ಗಂಭೀರವಾಗಿ ಗಾಯವಾಗಿತ್ತು. ಬಳಿಕ 5 ಸಾವಿರ ಹಣ ನೀಡಿ, ಊರಿಗೆ ಕಳಿಸಿದ್ದ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...