ಬಳ್ಳಾರಿ | ಕಲೆಗಳು ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಬಸವರಾಜ

Date:

ಕಲೆಗಳು ಉಳಿದರೆ ನಾಡು ಉಳಿಯುತ್ತದೆ, ಸಂಸ್ಕೃತಿ ಉಳಿಯುತ್ತದೆ. ಕಲಾವಿದರು ಬೆಳೆಯುತ್ತಾರೆ. ಕಲಾ ಪೋಷಕರು ಕಲಾವಿದರಿಗೆ ತಮ್ಮ ತನು, ಮನ, ಧನದಿಂದ ಸಹಾಯ ಮಾಡಬೇಕು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಟಿ ಹೆಚ್ ಎಂ ಬಸವರಾಜ್ ತಿಳಿಸಿದರು.

ನಗರದ ಬ್ಯಾಂಕ್ ಕಾಲೋನಿ ಉದ್ಯಾನವನ ಬಯಲು ವೇದಿಕೆಯಲ್ಲಿ ಟಿ ಶಕುಂತಲಮ್ಮ, ಬಸವರಾಜ್ ಕಲಾ ಸಮಾಜ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ಇವರ ಪ್ರಾಯೋಜನೆ ಅಡಿಯಲ್ಲಿ ʼಸಾಂಸ್ಕೃತಿಕ ಸಂಭ್ರಮʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ತೊಗಲು ಗೊಂಬೆ ಪ್ರದರ್ಶನ ಒಂದು ಪ್ರಾಚೀನ ಕಲೆ. ಸಾವಿರಾರು ವರ್ಷಗಳ ಹಿಂದೆ ರಾಮಾಯಣ ಮಹಾಭಾರತವನ್ನು ಮಾತನಾಡುವ ಚಿತ್ರಗಳ ಮೂಲಕ ಜನರಿಗೆ ಅರ್ಥ ಮಾಡಿಸುತ್ತಿದ್ದುದ್ದರಿಂದ ಈ ಕಲೆ ಜೀವಂತವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈ ಕಲೆ ಹುಟ್ಟಿದೆ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ. ದೇಶ ವಿದೇಶಗಳಲ್ಲಿ ಈ ಕಲೆಯನ್ನು ಬೆಳಗಲ್ ಈರಣ್ಣನವರು ಆಡಿಸಿ ಬಂದಿದ್ದಾರೆ. ಈಗಲೂ ಅವರ ಮನೆತನದವರು ತಮ್ಮ ಸೂಕ್ಷ್ಮ ಕುಸುರಿ ಕೆಲಸದಿಂದ ಗೊಂಬೆಗಳನ್ನು ತಯಾರಿ ಮಾಡಿ, ಅನೇಕ ಕಥೆಗಳಿಗೆ ಜೀವ ಕೊಟ್ಟು ಪ್ರದರ್ಶಿಸಿದ್ದಾರೆ. ಇಂದಿಗೂ ರಾಮಾಯಣದ ಕುರುಹುಗಳು ಆನೆಗೊಂದಿ ಹಾಗೂ ಹಂಪಿಯಲ್ಲಿ ಕಾಣಬಹುದು. ಮಕ್ಕಳಿಗೆ ಪಾಠ ಹೇಳಿ ಕೊಡುವುದರಿಂದ ಚಿತ್ರಗಳ ಮೂಲಕ ತೋರಿಸುವುದರಿಂದ ಬಹುಬೇಗ ಅರ್ಥವಾಗುತ್ತದೆ. ಸುಬ್ಬಣ್ಣ ಮತ್ತು ತಂಡದವರು ಈಗ ವಾಲಿ ಒದೆ ಎಂಬ ತಗಲುಗೊಂಬೆ ಪ್ರದರ್ಶನವನ್ನು ಬಹಳ ಶ್ರಮಪಟ್ಟು ನಿಮಗೆಲ್ಲಾ ತೋರಿಸುತ್ತಿದ್ದಾರೆ” ಎಂದು ಪ್ರಶಂಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕ್ ಅಧಿಕಾರಿ ಗಣಕೆಹಾಳ್ ಶಾಂತಪ್ಪ ಮಾತನಾಡಿ, “ನಮ್ಮ ಜಿಲ್ಲೆಯಲ್ಲಿ ಇಂತಹ ಕಲಾ ಪ್ರಕಾರಗಳು ಇರುವುದು ಅತ್ಯಂತ ಹೆಮ್ಮೆಯ ವಿಷಯ” ಎಂದರು.

ಇದನ್ನೂ ಓದಿ: ಬಳ್ಳಾರಿ | ಮಾನಸಿಕ ಒತ್ತಡ ನಿವಾರಿಸಲು ಸಾಮಾಜಿಕ ಸಂವಹನ ಬೆಳಿಸಿಕೊಳ್ಳಿ: ನ್ಯಾ. ರಾಜೇಶ್ ಹೊಸಮನೆ

ಅಧ್ಯಕ್ಷತೆ ವಹಿಸಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಮಸೀದಿಪುರ ಚಂದ್ರಶೇಖರಗೌಡ ಮಾತನಾಡಿ, “ರಾಮಾಯಣದಲ್ಲಿ ಬರುವ ಸನ್ನಿವೇಶಗಳನ್ನು ಅತ್ಯಂತ ಸೂಕ್ಷ್ಮವಾಗಿ ಎಲ್ಲರ ಮನಮುಟ್ಟುವಂತೆ ಕಥೆಯನ್ನು ನಿರ್ದೇಶಿಸಿರುವುದು ಸುಬ್ಬಣ್ಣ ಮತ್ತು ತಂಡದವರನ್ನು ಅಭಿನಂದಿಸುತ್ತೇನೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ ಕೊರಳುಗುಂದಿ ಬಸವನಗೌಡ ಟ್ರಸ್ಟ್ ಅಧ್ಯಕ್ಷ ಟಿ ಸುನಿಲ್ ಕುಮಾರ್, ಆರ್ಯ ಈಡಿಗ ಮಹಾಸಭದ ಸದಸ್ಯ ಭೀಮ ಲಿಂಗ, ಜ್ಯೋತಿ ಎಲ್ಲನಗೌಡ, ಶಶಿಕಲಾ, ಮಹಾಂತಯ್ಯ ಸ್ವಾಮಿ, ಬೆಳಗಲ್ ಈರಣ್ಣನವರ, ಪುತ್ರ ರಮಣಪ್ಪ ಭಜಂತ್ರಿ, ತುಳಸಿ ಸುಬ್ಬಣ್ಣ ಮಾಸ್ಟರ್ ಮುದ್ದಾಟನೂರ್ ತಿಪ್ಪೇಸ್ವಾಮಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...