ಬಳ್ಳಾರಿ | ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ; ಆಟ್ರಾಸಿಟಿ ಪ್ರಕರಣ ದಾಖಲು

Date:

ಬಳ್ಳಾರಿ ನಗರದ ಮೈಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ನ ವಾರ್ಡನ್ ಮತ್ತು ವಾಚ್‌ಮನ್ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವೈ.ಎಸ್ ದಿವಾಕರ್ ಮೇಲೆ ಕಳೆದ ಆರು ತಿಂಗಳಿಂದ ವಾರ್ಡನ್ ರುದ್ರಚಾರ್ಯ ಮತ್ತು ವಾಚ್‌ಮೆನ್ ಮನೋಹರ್ ಪಟೇಲ್ ಹಲ್ಲೆ ನಡೆಸುತ್ತಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಇಬ್ಬರು ಆರೋಪಿಗಳ ವಿರುದ್ಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 323, 324, 504, 506 ಹಾಗೂ ಎಸ್‌ಟಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(r), 3(1)(S), 3(2)(v-A) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಮಾತನಾಡಿರುವ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ರಘು ಸಿ, “ಹಳ್ಳಿಗಳಲ್ಲಿ ಅಸ್ಪೃಶ್ಯತೆ ಅನುಭವಿಸುತ್ತಿರುವ ಕಾಲಘಟ್ಟದಲ್ಲಿಯೂ ಹಳ್ಳಿಯಿಂದ ನಗರಕ್ಕೆ ಮಕ್ಕಳ ಉನ್ನತ ವಿದ್ಯಾಭ್ಯಾಸ ಕನಸು ಇಟ್ಟುಕೊಂಡು ಬರುತ್ತಾರೆ. ಅವರು ಪೋಷಕರು ನಗರಗಳಲ್ಲಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕೆಂಬ ಆಸೆಯಿಂದ ನಗರಗಳಿಗೆ ಕಳಿಸುತ್ತಾರೆ. ಆದರೆ, ನಗರಗಳ ಹಾಸ್ಟೆಲ್‌ಗಳು ಹಾಗೂ ಇನ್ನಿತರ ಪ್ರದೇಶಗಳಲ್ಲೂ ಜಾತೀಯತೆ ನಡೆಯುವುದು ಆಘಾತಕರ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...