ಬಳ್ಳಾರಿ | ತಡವಾಗಿ ಬಿತ್ತನೆಯಾದ ಹಿಂಗಾರು ಬೆಳೆ; ಕಟಾವಿನವರೆಗೆ ಕಾಲುವೆಗೆ ನೀರು ಬಿಡುಗಡೆ

Date:

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ತಡವಾಗಿ ಬಿತ್ತನೆ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್‌ನ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಲ್ ಬಸವರಾಜ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

“ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ಕುಡಿಯುವ ನೀರು ಒಳಗೊಂಡಂತೆ ಇತರೆ ಚಟುವಟಿಕೆಗಳಿಗೂ ನೀರು ಹರಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರು ಹರಿಸುವ ಕಾಲಾವಧಿ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಎಡದಂಡೆ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏಪ್ರಿಲ್‌ 1ರಿಂದ 10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ವಿಳಂಬವಾಗಿರುವ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್‌ನಂತೆ ನೀರು ಹರಿಸಲಾಗುವುದು.

ಎಡದಂಡೆ ವಿಜಯನಗರ ಕಾಲುವೆ : ಏಪ್ರಿಲ್‌ 11 ರಿಂದ ಮೇ 10ರವರೆಗೆ 150 ಕ್ಯೂಸೆಕ್‌ನಂತೆ ವಿತರಣಾ ಕಾಲುವೆ 1ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆ ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ: ಬಲದಂಡೆ ಕೆಳಮಟ್ಟದ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರ ವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್‌ನಂತೆ ಹರಿಸಲಾಗುವುದು.

ರಾಯ ಬಸವಣ್ಣ ಕಾಲುವೆ : ಏಪ್ರಿಲ್‌ 1ರಿಂದ ಮೇ 31ರವರೆಗೆ ಲಭ್ಯವಾಗುವ ನೀರನಲ್ಲಿ 200 ಕ್ಯೂಸೆಕ್‌ನಂತೆ ನೀರು ಹರಿಸಲಾಗುವುದು.
ನದಿ ಪೂರಕ: ಸುಮಾರು 90 ಕ್ಯೂಸೆಕ್‌ನಂತೆ ನದಿ ಪೂರಕ ಕಾರ್ಖಾನೆ ಒಳಗೊಂಡಂತೆ ನೀರು ಹರಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ, ಅನೈರ್ಮಲ್ಯ; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ರೈತ ಬಾಂಧವರಲ್ಲಿ ಮನವಿ : “ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಹಿಂಗಾರು ಹಂಗಾಮಿನ ಬೆಳೆದು ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಹಾಗೂ ಕುಡಿಯುವ ನೀರು ಒಳಗೊಂಡಂತೆ ಹರಿಸಲಾಗುವುದು. ಹಾಗಾಗಿ ರೈತರು ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗದಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು” ಎಂದು ರೈತ ಬಾಂಧವರಲ್ಲಿ ಕೋರಲಾಗಿದೆ.

“ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ, ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...