ಬಳ್ಳಾರಿ | ಫೋನ್ ಬದಲಿಗೆ ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ತಿರುಮಲ‌ ಶಾಲೆ ಅಧ್ಯಕ್ಷ ಯಲ್ಲಪ್ಪ

Date:

ಮೊಬೈಲ್ ಫೋನ್ ಬಿಟ್ಟು ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದರಿಂದ ಬುದ್ಧಿಶಕ್ತಿಯ ಜತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ. ಇದರಿಂದ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಬಹುದು ಎಂದು ಬಳ್ಳಾರಿಯ ತಿರುಮಲ ಶಾಲೆಯ ಅಧ್ಯಕ್ಷ ಯಲ್ಲಪ್ಪ ತಿಳಿಸಿದರು.

ತಾಲೂಕಿನ ಗೋಡೆಹಾಳ್ ಗ್ರಾಮದ ತಿರುಮಲ ಹೈಸ್ಕೂಲ್ ನಲ್ಲಿ ಬಳ್ಳಾರಿ ಜಿಲ್ಲಾ ಚೆಸ್ ಚಾಂಪಿಯನ್ ಅಸೋಸಿಯೇಷನ್, ತಿರುಮಲ ಹೈಸ್ಕೂಲ್ ಹಾಗೂ ವಿನಾಯಕ ಎಜುಕೇಶನ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ, ತಿರುಮಲ ಬ್ರೈನ್ ಫೋರ್ಸ್ ಚೆಸ್ ಫೆಸ್ಟಿವಲ್ 2025ರ ಅಂಡರ್ 16 ಓಪನ್ ಕೆಟಗರಿ ಚೆಸ್ ಟೂರ್ನಮೆಂಟ್ ಉದ್ಘಾಟಿಸಿ ಅವರು ಮಾತನಾಡಿದರು.

“ಇಂದಿನ ಉನ್ನತ ತಂತ್ರಜ್ಞಾನದಲ್ಲಿ ರಾಕೆಟ್‌ಗಳೊಂದಿಗೆ ಓಡಾಡುತ್ತಿರುವ ಜನರು ಮೊಬೈಲ್, ಫೋನ್‌ಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ತಮ್ಮ ಅಮೂಲ್ಯ ಸಮಯ, ವಯಸ್ಸನ್ನು ಕಳೆದುಕೊಳ್ಳುತ್ತಿದ್ದಾರೆ. ಹುಟ್ಟಿನಿಂದ ವೃದ್ಧಾಪ್ಯದವರೆಗೆ ಮೊಬೈಲ್ ಫೋನ್ ಇಲ್ಲದಿದ್ದರೆ ಅವರು ಚಿಂತಿತರಾಗುತ್ತಾರೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ತಮ್ಮ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಲು ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಮೆದುಳಿಗೆ ವಿಶೇಷವಾಗಿ ಒಳ್ಳೆಯದಾದ ಚೆಸ್ ಬಗ್ಗೆ ಉತ್ಸಾಹ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಮಾಜಿ ಅರೆ ಸೈನಿಕರಿಂದ ಗಾಂಧಿ ಜಯಂತಿ ಆಚರಣೆ

8 ರಿಂದ 16 ವರ್ಷದೊಳಗಿನ ವಿದ್ಯಾರ್ಥಿಗಳು ಐದು ವಿಭಾಗಗಳಲ್ಲಿ ಸುಮಾರು 350 ವಿದ್ಯಾರ್ಥಿಗಳು ಚೆಸ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. 8 ವರ್ಷದೊಳಗಿನ ಮತ್ತು 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಒಟ್ಟು ಐದು ಬ್ಯಾಚ್‌ಗಳಿಗೆ ಪ್ರತಿ ಬ್ಯಾಚ್‌ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಪ್ರಮಾಣಪತ್ರ, ಪದಕ ಮತ್ತು ಟ್ರೋಫಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ಚೆಸ್ ಚಾಂಪಿಯನ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಪೋಲೊ ಪ್ರವೀಣ್, ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ, ಇಂಗ್ಲಿಷ್ ಶಿಕ್ಷಕರಾದ ಪ್ರಕಾಶ್, ತಿರುಮಲ ಶಾಲೆಯ ಮುಖ್ಯ ಗುರುಗಳಾದ ನಾಗರಾಜು, ಪ್ರಮೋದ್ ರಾಜ ಮೋರೆ, ಜಗದೀಶ್ ಕೋರಿ, ಎಸ್ಎಸ್ಎಂಡಿ ರಫೀಕ್, ಮೌನೇಶ್ವರ ಆಚಾರ್ಯ, ಕಪ್ಪಗಲ್ಲು ಶಾರದಾ ಶಾಲೆಯ ಅಧ್ಯಕ್ಷರಾದ ಪರಮೇಶಪ್ಪ, ತಿಪ್ಪಣ, ಗಂಗಾ, ಇಶಾಕ್ ಹಾಗೂ ಇತರ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...