ಬಳ್ಳಾರಿ | ಸೌಲಭ್ಯವಿಲ್ಲದ ವಸತಿ ನಿಲಯ; ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ

Date:

ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿ ನಿಲಯದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟುಹೋಗಿ ಹಲವು ವರ್ಷಗಳೇ ಕಳೆದರೂ ಈ ವರೆಗೂ ದುರಸ್ತಿಯಾಗಗಿಲ್ಲ. ಬಳಕೆಯಾಗದೆ ಶಿಥಿಲಾವಸ್ಥೆತಲುಪಿದೆ.

ಸಂಬಂಧಿಸಿದ ಯಾವ ಅಧಿಕಾರಿಗಳಾಗಲಿ ಈ ಬಗ್ಗೆ ಗಮನ ಹರಿಸಿಲ್ಲ. ನಿಲಯ ಪಾಲಕರು ಸಮಸ್ಯೆ ಗೊತ್ತಿದ್ದರೂ, ಗಮನ ಹರಿಸದೇ ಸರ್ಕಾರದ ಹಣ ಪೋಲು ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವು ಕೋಟ್ಯಾಂತರ ರೂ. ಹಣ ಖರ್ಚುಮಾಡಿ ಕಟ್ಟಡ, ಸೂಕ್ತ ಸೌಲಭ್ಯಗಳನ್ನು ಒದಗಿಸಿದರೆ ಅದನ್ನು ನಿರ್ವಹಿಸದೇ ನಿರ್ಲಕ್ಷಿಸುತ್ತಾ ತಮಗೆ ಬರುವ ಸರ್ಕಾರದ ವೇತನಕ್ಕೆ ಮಾತ್ರ ಅಧಿಕಾರಿಗಳಾಗಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತ ಪಡಿಸಿದ್ದಾರೆ.

ವಸತಿ ನಿಲಯದ ಸಮಸ್ಯೆಗಳನ್ನು ಯಾಋ ಬಳಿ ಹೇಳಿದರೂ ಅಷ್ಟೇ, ಪ್ರಯೋಜನವಿಲ್ಲ. ನಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ ಅವರಿಗೆ ಸಾಕಷ್ಟು ಸಲ ದೂರಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ತೋಡಿಕೊಳ್ಳುತ್ತಾರೆ..

ವಸತಿ ನಿಲಯದಲ್ಲಿ ಆಹಾರ ವಿತರಣೆ ಫಲಕದ ಅನುಸಾರ ಊಟವನ್ನು ನೀಡುತ್ತಿಲ್ಲ. ಸರಿಯಾದ ವಿದ್ಯುತ್ ದೀಪಗಳಿಲ್ಲ, ರಾತ್ರಿವೇಳೆ ವಿದ್ಯುತ್ ಹೋದಲ್ಲಿ ಇನ್ವರ್ಟರ್‌ ಇಲ್ಲ, ನಿಲಯಕ್ಕೆ ಸಿಸಿ ಕ್ಯಾಮೆರಾ ನಾಮ ಮಾತ್ರಕ್ಕೆ ಅಳವಡಿಸಲಾಗಿದೆ. ಅದು ರಿಪೇರಿಯಿದ್ದು ಕೆಲಸಮಾಡುತ್ತಿಲ್ಲ. ನಿಲಯಪಾಲಕ ವೆಂಕಟೇಶ್ ಅವರು ಮಾತ್ರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ.

ಸರಿಯಾದ ಶೌಚಾಲಯ ವ್ಯವಸ್ಥೆಯಿಲ್ಲ, ಕೆಲವೊಂದು ಕೊಠಡಿಯಲ್ಲಿ ಒಂದು ಪ್ಯಾನ್ ಇದೆ. ಇನ್ನೂ ಕೆಲವಡೆ ಎರಡೂ ಪ್ಯಾನ್‌ಗಳು ಇಲ್ಲದಿರುವುದರ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.ಇನ್ನು ಸಮಸ್ಯೆಗಳ ಬಗ್ಗೆ ದೂರಿದವರನ್ನು ಗುರಿಯಾಗಿಸಿ ಬೆದರಿಸುತ್ತಾರೆ ಎಂದು ಆರೋಪಿಸಿದರು.

ವರದಿ | ಖಾಜಾ ಮೈನುದ್ದಿನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...