ಬಳ್ಳಾರಿ | ಡಾ. ಸುಮನ್ ಸೋಮೇಶ್ವರ್ ಗಡ್ಡಿಗೆ ಐಎಂಎ ನ್ಯಾಷನಲ್ ಡಾಕ್ಟರ್ ಅಕಾಡೆಮಿಕ್ ಪ್ರಶಸ್ತಿ

Date:

ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಬಳ್ಳಾರಿ ನಗರದ ಹಿರಿಯ ವೈದ್ಯ ಡಾ. ಸುಮನ್ ಸೋಮೇಶ್ವರ್ ಗಡ್ಡಿಯವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ವೈದ್ಯರಿಗೆ ನೀಡುವ ಪ್ರತಿಷ್ಠಿತ ಐಎಂಎ ನ್ಯಾಷನಲ್ ಡಾಕ್ಟರ್ ಅಕಾಡೆಮಿಕ್ ಪ್ರಶಸ್ತಿ ಲಭಿಸಿದೆ.

ಅಬ್ದುಲ್ ನಬಿ ಸಾಬ್ ಅಬೂಬಕರ್ ಸಿದ್ದಿಕ್ ಎಜುಕೇಶನಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಡಾ. ಸುಮನ್ ಗಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

‌ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಹುಮಯೂನ್ ಖಾನ್ ಮಾತನಾಡಿ, “ಇಂದಿನ ದಿನಗಳಲ್ಲಿ ಮಹಿಳೆಯರು ಮಿಲಿಟರಿ, ಎರೋಸ್ಪೇಸ್ ಸಾಹಿತ್ಯ, ಕಲೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಅದೇ ಪ್ರಕಾರವಾಗಿ ನಗರದ ದಾನಮ್ಮ ಆಸ್ಪತ್ರೆಯ ಹಿರಿಯ ಮಹಿಳಾ ವೈದ್ಯರಾದ ಡಾ. ಸುಮನ್ ಗಡ್ಡಿಯವರು ಸಹ ತಮ್ಮ ವೈದ್ಯಕೀಯ ವೃತ್ತಿಯಲ್ಲಿ ಕಳೆದ ಹಲವು ದಶಕಗಳಿಂದ ನಗರದಲ್ಲಿ ಗಣನೀಯ ಸೇವೆಯನ್ನು ಮಾಡುತ್ತಾ ಬಂದಿರುತ್ತಾರೆ ಇವರಿಗೆ ದೇಶದ ಪ್ರತಿಷ್ಠಿತ ಐಎಂಎ ನ್ಯಾಷನಲ್ ಡಾಕ್ಟರೇಟ್ ಪ್ರಶಸ್ತಿ ಲಭಿಸಿರುವುದು ಸಂತಸದ ವಿಷಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಸ್ಟ್ ಅಧ್ಯಕ್ಷ ಮಹಮದ್ ಅಲಿ ಮಾತನಾಡಿ, “ಡಾ. ಸುಮನ್ ಸೋಮೇಶ್ವರ್ ಗಡ್ಡಿ ಅವರು ನಮಗೆ ಕಳೆದ ಹಲವು ವರ್ಷಗಳಿಂದ ಚಿರಪರಿಚಿತರಿದ್ದು ನಮ್ಮ ಯಾವುದೇ ಆರೋಗ್ಯ ತೊಂದರೆ ಇದ್ದಲ್ಲಿ ಇವರನ್ನ ಸಂಪರ್ಕಿಸಿ ಸಲಹೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದೇವೆ. ಆರ್ಥಿಕವಾಗಿ ಅಸಹಾಯಕರಾದ ರೋಗಿಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಹಾಗೂ ಉಚಿತವಾಗಿ ಚಿಕಿತ್ಸೆ ನೀಡಿದ ಉದಾಹರಣೆಗಳಿವೆ ಇಂಥ ವೈದ್ಯರಿಗೆ ಅಕಾಡೆಮಿಕ್ ಪ್ರಶಸ್ತಿ ಬಂದಿರುವುದು ಅವರ ಸೇವೆಗೆ ತಕ್ಕ ಪ್ರತಿಫಲ” ಎಂದರು.

ಇದನ್ನೂ ಓದಿ: ಬಳ್ಳಾರಿ | ಫಲಿಸಿದ ವರ್ಷಗಳ ಹೋರಾಟ; ತೋರಣಗಲ್ಲಿನಲ್ಲಿ ನೂತನ ಪದವಿಪೂರ್ವ ಕಾಲೇಜು

ಡಾ. ಸುಮನ್ ಗಡ್ಡಿ ಅವರು ತಮ್ಮ ಭಾಷಣದಲ್ಲಿ ಮಾತನಾಡಿ, “ಇದು ನನಗೆ ನನ್ನ ವೈದ್ಯಕೀಯ ವೃತ್ತಿಯಲ್ಲಿ ಖುಷಿ ಹಾಗೂ ಹೆಮ್ಮೆ ಪಡುವ ದಿನವಾಗಿದೆ ಕಳೆದ ಹಲವಾರು ದಶಕಗಳಿಂದ ನಗರದ ಸಾರ್ವಜನಿಕರಿಗೆ ವೈದ್ಯಕೀಯ ಸೇವೆಯನ್ನು ಒದಗಿಸಿರುವುದೇ ನನಗೆ ಈ ಪ್ರಶಸ್ತಿಗೆ ಆಯ್ಕೆಯಾಗಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆಯನ್ನು ಮಾಡಲು ನನಗೆ ಜವಾಬ್ದಾರಿ, ಗೌರವ ಮತ್ತು ಇನ್ನಷ್ಟು ಹೊಣೆಗಾರಿಕೆಯನ್ನು ನೀಡಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮನಯ್ಯಾ, ಮೇತಬ್ ಅಲಿ, ಸಾರ್ಫಾರಾಜ್, ಜಾಹಿರುದ್ದಿನ್, ಅಲ್ತಾಫ್, ಹುಸೇನ್ ಭಾಷಾ ಸ್ಟಾರ್ ರಫೀಕ್, ಸೇಠು ವಲಿ, ಗಫ್ಫರ್, ಗೌಸ್, ಹನೀಫ್, ಜೈನುಲ್, ಟಿಪ್ಪು, ಅಬ್ದುಲ್ ಶೇಕ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...