ಬಳ್ಳಾರಿ | ʼಆಪರೇಷನ್‌ ಸಿಂಧೂರ್‌ʼಗೆ ಡಿವೈಎಫ್ಐ ಜಿಲ್ಲಾ ಸಮಿತಿಯಿಂದ ಬೆಂಬಲ

Date:

ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿಗೈದ ಭಾರತೀಯ ಸೇನೆಗೆ ಡಿವೈಎಫ್‌ಐ ಕರ್ನಾಟಕ ಬಳ್ಳಾರಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಸ್ವಾಗತಿಸುತ್ತದೆ ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಈಡಗೇರ ಹೇಳಿದರು.

“ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದದ್ದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ. ಈ ಘೋರ ಕೃತ್ಯದ ನಂತರ ದೇಶದ ಜನತೆ ಭಯೋತ್ಪಾದನೆಯ ವಿರುದ್ಧ ಬಲವಾಗಿ ಪ್ರತಿರೋಧಿಸಿತು. ಡಿವೈಎಫ್‌ಐ ಸಂಘಟನೆಯು ಭಯೋತ್ಪಾದನೆಯ ವಿರುದ್ಧ ದೃಢ ನಿಲುವು ತೆಗೆದುಕೊಂಡು ಪ್ರತಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರತಿಯೊಂದು ರಾಜಕೀಯ ಪಕ್ಷವು ಸರ್ಕಾರದ ಕ್ರಮಗಳಿಗೆ ಸಂಪೂರ್ಣ ಬೆಂಬಲವನ್ನು ನೀಡಿದ್ದವು. ಇದು ಭಯೋತ್ಪಾದನೆಯ ವಿರುದ್ಧ ದೇಶದ ಒಗ್ಗಟ್ಟನ್ನು ಪ್ರತಿಬಿಂಬಿಸುತ್ತದೆ” ಎಂದರು.

“ಧಾರ್ಮಿಕ ಭಯೋತ್ಪಾದನೆ, ಕೋಮುವಾದ ಮತ್ತು ನಮ್ಮ ರಾಷ್ಟ್ರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ ವಿಭಜಕ ಶಕ್ತಿಗಳ ವಿರುದ್ಧ ಡಿವೈಎಫ್‌ಐ ಯಾವಾಗಲೂ ನಿಂತಿದೆ. ತ್ಯಾಗ ಮತ್ತು ಪ್ರತಿರೋಧದ ಪರಂಪರೆಯೊಂದಿಗೆ, ನಮ್ಮ ದೇಶದ ಏಕತೆಯನ್ನು ಮುರಿಯುವ ಎಲ್ಲಾ ಪ್ರಯತ್ನಗಳನ್ನು ಡಿವೈಎಫ್‌ಐ ವಿರೋಧಿಸುವುದನ್ನು ಮುಂದುವರಿಸುತ್ತದೆ. ಕ್ರೂರ ಪಹಲ್ಗಾಮ್ ದಾಳಿಯ ಹಿಂದಿನ ನಿಜವಾದ ಅಪರಾಧಿಗಳು ಮತ್ತು ಮಾಸ್ಟರ್ ಮೈಂಡ್‌ಗಳನ್ನು ಗುರುತಿಸಿ ಮಟ್ಟಹಾಕಬೇಕಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಮೇ 20ರಂದು ಅಂಗನವಾಡಿ ನೌಕರರ ಮುಷ್ಕರ

“ಪಹಲ್ಗಾಮ್‌ನಲ್ಲಿ ಅಮಾಯಕರ ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿಸಲು ಮತ್ತು ಯಾವುದೇ ಭಯೋತ್ಪಾದಕ ಶಿಬಿರಗಳು ತನ್ನ ಭೂಪ್ರದೇಶದಿಂದ ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡವನ್ನು ಮುಂದುವರೆಸಬೇಕು ಮತ್ತು ಭಾರತ ಸರ್ಕಾರವು ಜನರ ಏಕತೆ ಹಾಗೂ ದೇಶದ ಸಮಗ್ರತೆಯನ್ನು ರಕ್ಷಿಸುವುದನ್ನು ಖಚಿತಪಡಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...