ಬಳ್ಳಾರಿ | ತುಂಗಭದ್ರಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

Date:

ತುಂಗಭದ್ರಾ ಬಲದಂಡೆ ಕಾಲುವೆಗೆ ಕನಿಷ್ಠ 20 ದಿವಸದವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಎಐಕೆಕೆಎಂಸ್ ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬಳ್ಳಾರಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಮಾತನಾಡಿ, “ಬಳ್ಳಾರಿ ಭಾಗದ ರೈತರು ಜೋಳ, ಮೆಕ್ಕೆಜೋಳ, ಸಜ್ಜೆ, ಹಲಸಂದೆ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆ ಬೆಳೆಯುತ್ತಿದ್ದಾರೆ. ಇವರಿಗೆ ಈ ಬೆಳೆಗಳು ಕೈಸೇರಲು ಇನ್ನೂ ಸುಮಾರು 20 ದಿನಗಳವರೆಗೆ ನೀರಿನ ಅವಶ್ಯಕತೆಯಿದೆ. ಹಾಗಾಗಿ ರೈತರ ಹಿತದೃಷ್ಟಿಯಿಂದ ಈ ತಿಂಗಳ ಪೂರ್ತಿ ಎಚ್‌ಎಲ್‌ಸಿ ಕಾಲುವೆಗೆ ನೀರು ಹರಿಸಬೇಕು” ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಒತ್ತಾಯಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡಿ, “ಜನವರಿ 20ರವರೆಗೂ ರೈತರ ಜಮೀನುಗಳಿಗಳಿಗೆ ನೀರು ಬೇಕಾಗಿದೆ. ಒಂದು ವೇಳೆ ನೀರಿನ ಕೊರತೆಯಾದರೆ, ಬೆಳೆದ ಬೆಳೆ ಕೈಗೆ ಸಿಗದೆ ಹಾಳಾಗುತ್ತದೆ. ‘ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆʼ. ಈಗಾಗಲೇ ಮೆಣಸಿನಕಾಯಿ ಬೆಳೆಯಲ್ಲಿ ಸಾಕಷ್ಟು ನಷ್ಟದಿಂದ ಸೋತಿದ್ದಾರೆ. ಈಗ ಬರುವ ಬೆಳೆಯಲ್ಲಿಯೂ ನಷ್ಟವಾದರೆ ರೈತರು ಗುಳೆವು ಹೋಗುವ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಬೆಳೆ ಕಟಾವಿಗೆ ಬರುವವರೆಗೂ ನೀರು ಹರಿಸಬೇಕು” ಎಂದು ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ರನ್ನ ವೈಭವಕ್ಕೆ ಒಂದು ಕೋಟಿ ಅನುದಾನ: ಸಚಿವ ತಿಮ್ಮಾಪೂರ

ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರೈತರಾದ ಈಶ್ವರ್ ಗೌಡ, ಬಸವರಾಜ್, ಗಾದಿಲಿಂಗ, ಓಂಕಾರ, ಸ್ವಾಮಿ, ಬಸವರಾಜ್, ತುಳಸಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...