ಬಳ್ಳಾರಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವಿಗೆ ಡಿವೈಎಫ್ಐ ಆಗ್ರಹ

Date:

ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಜಾರ್ಖಂಡ್ ಮೂಲದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಮತ್ತು ಬಾಲಕಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿ ಡಿವೈಎಫ್‌ಐನಿಂದ ಸಂಡೂರು ತಾಲೂಕು ತಹಶೀಲ್ದಾರ್ ಅನಿಲ್‌ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸ್ವಾಮಿ ಮಾತನಾಡಿ, “ತೋರಣಗಲ್ಲು ಗ್ರಾಮದಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯ ಬಂಧನವೂ ಆಗಿದೆ. ಬಂಧಿತ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಅತ್ಯಾಚಾರವೆಸಗಿದ ಆರೋಪಿ ಕಮಾಲಾಪುರ ಮಂಜುನಾಥನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ಇಲಾಖೆಗೆ ಸ್ವಾಗತರ್ಹ. ಅದೇ ರೀತಿ ಅತ್ಯಾಚಾರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದರು.

“ಬಾಲಕಿಗೆ ಚಿಕಿತ್ಸೆಯ ಖರ್ಚು ವೆಚ್ಚ ಪರಿಗಣಿಸಿ ಸೂಕ್ತ ಪರಿಹಾರಕ್ಕೆ ಹಾಗೂ ಅಲ್ಲದೆ ಕುಟುಂಬ ನಿರ್ವಣೆಗೆ ₹25 ಲಕ್ಷ ಆರ್ಥಿಕ ನೆರವು ನೀಡಬೇಕು. ತೋರಣಗಲ್ಲು ವ್ಯಾಪ್ತಿಯ ಪ್ರದೇಶವು ಕೈಗಾರಿಕೆಗಳಿಂದ ಕೂಡಿರುವ ಪ್ರದೇಶವಾದುದರಿಂದ ಸಿ ಸಿ ಕ್ಯಾಮೆರಾ, ಸುರಕ್ಷತೆ ಫಲಕಗಳು ಸೇರಿದಂತೆ ಸಾಧನಗಳನ್ನು ಅಳವಡಿಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲಕಿಯರ ಮತ್ತು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯಾವುದೇ ಆರೋಪಿಗಳಾಗಲಿ ಸುಪ್ರೀಂಕೋರ್ಟ್ ಕಾನೂನಾತ್ಮಕ ಗಲ್ಲುಶಿಕ್ಷೆ ಜಾರಿ ಮಾಡುವ ಮೂಲಕ ಅತ್ಯಾಚಾರಿಗಳಿಗೆ ತಕ್ಕ ಪಾಠವಾಗಬೇಕು.‌ ಇದರಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ತ್ವರಿತವಾಗಿ ಗಲ್ಲುಶಿಕ್ಷೆ ಜಾರಿ ಮಾಡಬೇಕು” ಎಂದು‌ ಒತ್ತಾಯಿಸಿದರು.

ಜಿಲ್ಲಾ ಕ್ರಿಡಾ ಕಾರ್ಯದರ್ಶಿ ನಾಗಭೂಷಣ ಮಾತನಾಡಿ, “ಘಟನೆ ನಡೆದು 24 ದಿನಗಳು ಕಳೆದರೂ ಬಾಲಕಿ ಆಘಾತದಿಂದ ಚೇತರಿಸಿಕೊಂಡಿಲ್ಲ. ಭಯದ ವಾತವರಣದಲ್ಲಿ ಬಳಲುತ್ತಿದ್ದು, ಗುಣಮುಖವಾಗಲು 3 ತಿಂಗಳ ಕಾಲಾವಕಾಶ ಬೇಕಾಗುತ್ತದೆಂದು ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರು ದುಃಖದಿಂದ ಆತಂಕಕೊಳಗಾಗಿದ್ದು, ಅವರಿಗೆ ಬದುಕಲು ಬಾಡಿಗೆ ಮನೆಯ ಒಂದು ರೂಮ್ ಬಿಟ್ಟರೆ ಜೀವನ ನಡೆಸಲು ಆದಾಯವಿಲ್ಲದೇ ವಾಸ ಮಾಡಲು ಕಷ್ಟಕರವಾಗಿದೆ. ಆದ್ದರಿಂದ ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪರಶುರಾಂಪುರ ತಾಲೂಕು ಕೇಂದ್ರಕ್ಕಾಗಿ ಫೆ.10ಕ್ಕೆ ಚಳುವಳಿ; ಅಖಂಡ ಕರ್ನಾಟಕ ರೈತ ಸಂಘ

ಮನವಿ ಪತ್ರ ಸ್ವೀಕರಸಿ ತಹಶೀಲ್ದಾರ್ ಅನಿಲ್ ಕುಮಾರ್‌ ಮಾತನಾಡಿ, “ಈಗಾಗಲೇ ಆ ಬಾಲಕಿ ರಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಂತ್ರಸ್ತ ಮಗುವಿಗ ಶೈಕ್ಷಣಿಕ ಅನುಕೂಲ ಮಾಡುತ್ತೇವೆ. ಕುಟುಂಬಕ್ಕೆ ₹25 ಲಕ್ಷ ಆರ್ಥಿಕ ನೆರವಿನ ಕುರಿತು ಚರ್ಚೆ ಮಾಡಿ ಸರ್ಕಾರದ ಮಟ್ಟದಲ್ಲಿ ಗಮನಕ್ಕೆ ತರುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಜಿಲ್ಲಾ ಸಹಕಾರ್ಯದರ್ಶಿ ಶರೀಫ್, ಜಿಲ್ಲಾ ಮುಖಂಡರು ಖಲಾಂದರ್ ಭಾಷಾ, ಬಾಲಕಿ ಪೋಷಕರು ಮತ್ತು ಸುನಿಲ್ ಚೌಧರಿ, ಶಂಭು ಚೌಧರಿ, ಬಬುಲ್ ಕುಮಾರ್, ಮನೋಜ್ ಕುಮಾರ್, ತನು ಚೌಧರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...