ಬಳ್ಳಾರಿ | ಸರ್ಕಾರಿ ಶಾಲೆಗಿಲ್ಲ ಕಾಂಪೌಂಡ್; ಅನೈತಿಕ ಚಟುವಟಿಕೆ ತಾಣವಾದ ಆವರಣ

Date:

ಬಳ್ಳಾರಿ ನಗರದ ಶ್ರೀರಾಂಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಕಾಂಪೌಂಡ್‌ಗೆ ಗೇಟ್‌ ಇಲ್ಲದೆ, ಸಂಜೆಯ ನಂತರ ಶಾಲೆಯ ಮೈದಾನವು ಅನೈತಿಕ ಚಟುವಟಿಕೆಯ ತಾಣವಾಗುತ್ತಿದೆ. ಶಾಲೆಯ ಆವರಣದಲ್ಲಿ ಸ್ವಚ್ಛತೆ ಇಲ್ಲದೆ, ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಇದೆ ಎಂಬ ಆರೋಪ ಕೇಳಿಬಂದಿದೆ.

ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರುಜ 500 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕನ್ನಡ, ಇಂಗ್ಲಿಷ್, ತೆಲುಗು ಮಾಧ್ಯಮದಲ್ಲಿ ತರಗತಿಗಳಿವೆ. ಆದರೆ, ಶಾಲೆಯ ಆವರಣ ಸ್ವಚ್ಛವಾಗಿಲ್ಲದೆ ಇರುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗೆ ಹೆಚ್ಚಿನ ಮಕ್ಕಳು ದಾಖಲಾಗದೇ ಇರುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿದೆ.

ಸಂಜೆ ಶಾಲೆ ಮುಗಿದ ನಂತರ ಶಾಲೆಯ ಆವರಣದಲ್ಲಿ ಯುವಕರು ಮೋಜು-ಮಸ್ತಿ ಮಾಡುತ್ತಿದ್ದಾರೆ. ಅಲ್ಲದೆ, ಅನೈತಿಕ ಚಟುವಟಕೆಗಳಳೂ ನಡೆಯುತ್ತಿವೆ ಎಂದ ಆರೋಪಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾನಕ್ಕೆ ಹೆಚ್ಚಿನ ಜನರು ಬರುವುದರಿಂದ ದಟ್ಟಣೆಯಾಗುತ್ತದೆ. ಚುನಾವಣೆ ಮುಗಿದ ನಂತರ ಕಾಂಪೌಂಡ್ ಮತ್ತು ಗೇಟ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿ, ಇದ್ದ ಕಾಂಪೌಂಡ್‌ಅನ್ನು ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆಯ ಆಯುಕ್ತರು, ನಿರ್ಮಿತಿ ಕೇಂದ್ರದ ಮುಖ್ಯ ಇಂಜಿನಿಯರ್ ಅಧಿಕಾರಿಗಳು ಹೊಡೆದು ಹಾಕಿದ್ದರು. ಆದರೆ, ಈಗ ಕಾಂಪೌಂಡ್‌ ನಿರ್ಮಾಣ ಮಾಡಲಾಗಿಲ್ಲ. ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಶಾಲೆಯ ಮುಖ್ಯೋಪಾಧ್ಯಾಯ ವಿರುಪಾಕ್ಷಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲೆಯ ಕಾಂಪೌಂಡ್‌ ಹೊಡೆದಿರುವುದರಿಂದ ಸಂಜೆಯ ವೇಳೆ ಹಂದಿ, ದನ ಕರುಗಳ ಓಡಾಟ ಹೆಚ್ಚಾಗಿದೆ. ಅವುಗಳು ಮಲ ಮೂತ್ರ ವಿಸರ್ಜನೆ ಮಾಡುವ ಪರಿಣಾಮ ಸ್ವಚ್ಛತೆ ಇಲ್ಲವಾಗಿದೆ. ಇಂತಹ ವಾತಾವರಣದಲ್ಲಿ ಮಕ್ಕಳಿಗೆ ಪಾಠ ಮಾಡೋದು ಕಷ್ಟವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...