ಬಳ್ಳಾರಿ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹ

Date:

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಥಿತಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ ಟಿ ದುರುಗಪ್ಪ ಮಾತನಾಡಿ, “ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡ ತಿಂಗಳಿಂದ ವೇತನವನ್ನು ಆಯಾ ತಿಂಗಳ 5ನೇ ತಾರೀಖಿನ ಒಳಗಾಗಿ ನೀಡಬೇಕು” ಎಂದು ಆಗ್ರಹಿಸಿದರು.

“ಆರೋಗ್ಯ ಏರುಪೇರಾಗಿ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸಬೇಕು. ಅತಿಥಿ ಉಪನ್ಯಾಸಕರ ಹೆಸರಿನಲ್ಲಿ ಫ್ರಾವಿಡೆಂಟ್ ಫಂಡ್, ಇಎಸ್‌ಐ ನೀಡುವಂತೆ ಕ್ರಮ ಕೈಗೊಳ್ಳಬೇಕು. ಹಣಕಾಸು ಇಲಾಖೆಯ ವಿಳಂಬ ನೀತಿಯಿಂದಾಗಿ ಸಂಬಳ ನಿರಂತರವಾಗಿ ವಿಳಂಬವಾಗುತ್ತಿದ್ದು, ಇದನ್ನು ಆದಷ್ಟು ಬೇಗನೆ ಸುಧಾರಿಸಬೇಕು ಮತ್ತು ಯುಜಿಸಿ ನಿಯಮಾವಳಿಯಂತೆ ಗೌರವಧನವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ದೆಹಲಿ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಅಲ್ಲಿನ ಸರ್ಕಾರಗಳು ಸೇವಾ ಭದ್ರತೆಯನ್ನು ನೀಡಿ ಖಾಯಂ ಮಾಡಿರುವಂತೆ ಕರ್ನಾಟಕದಲ್ಲೂ ಈ ಕ್ರಮ ಜರುಗಿಸಬೇಕು. ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿದ್ದಾಗ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಸ್ತುತ ತಮ್ಮದೇ ಸರ್ಕಾರವಿದ್ದು, ನಮ್ಮನ್ನು ಖಾಯಂಗೊಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸರ್ಕಾರಿ ಆರೋಗ್ಯ ಕೇಂದ್ರದ ಸುತ್ತಲೂ ಸ್ವಚ್ಛತೆಯ ಕೊರತೆ

“12 ಸಾವಿರಕ್ಕೂ ಹೆಚ್ಚು ಅಥಿತಿ ಉಪನ್ಯಾಸಕರ ಜೀವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಕಳೆದ ಆಗಸ್ಟ್ ತಿಂಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಗೌರವಧನವನ್ನು ಶೀಘ್ರ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಡಾ ಎಚ್ ಹನುಮೇಶ್, ಜಿಲ್ಲಾ ಮುಖಂಡ ಡಾ ಕೆ ಬಸಪ್ಪ, ರುದ್ರಮುನಿ, ಡಿ ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ, ರಮೇಶ್ ಎಸ್ ಎಂ, ಗೋವಿಂದಪ್ಪ, ಗುರುರಾಜ್, ಪ್ರಭಾವತಿ, ಶುಭಾಜ್ಯೋತಿ, ಸುಜಾತ, ನವೀನಕುಮಾರಿ, ಸರಿತಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...