ಬಳ್ಳಾರಿ | ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊರತೆ; ತುಂಬು ಗರ್ಭಿಣಿ ಸಾವು

Date:

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕೂಲಿ ಕಾರ್ಮಿಕ ತುಂಬು ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜರುಗಿದೆ.

ಸಿರುಗುಪ್ಪ ತಾಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಇದ್ದರೂ, ಸೂಕ್ತ ಚಿಕಿತ್ಸೆ ಲಭ್ಯವಿಲ್ಲವೆಂದು ಪ್ರತಿನಿತ್ಯವೂ ಅನೇಕ ರೋಗಿಗಳನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಆದರೆ ದುರಾದೃಷ್ಟವಶಾತ್ ರೋಗಿಗಳು ಬಳ್ಳಾರಿ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿಯೇ ಮೃತಪಟ್ಟಿರುವ ಸಾವಿರಾರು ಉದಾಹರಣೆಗಳಿವೆ.

ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕಟ್ಟಡ ಕಾರ್ಮಿಕ ಮಹಿಳೆ ರಂಗಮ್ಮ ಎಂಬ ಮಹಿಳೆ, 9 ತಿಂಗಳ ತುಂಬು ಗರ್ಭಿಣಿಯಾಗಿದ್ದರು, ಚಿಕಿತ್ಸೆಗಾಗಿ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ಬಂದಾಗ ವೈದ್ಯರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದರು. ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಾದ ರಂಗಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರೋಗ್ಯಕ್ಕಾಗಿ ಕೋಟ್ಯಂತರ ಸುರಿದರೂ ಆಸ್ಪತ್ರೆಗಳಲ್ಲಿ ಇಂದಿಗೂ ಗುಣಮಟ್ಟ ಚಿಕಿತ್ಸೆ ಹಾಗೂ ಸೂಕ್ತ ಸೌಲಭ್ಯದ ಕೊರತೆಯಿಂಂದಾಗಿ ಗ್ರಾಮೀಣ ಭಾಗದ ಬಡ ಜನರು ಅಮೂಲ್ಯ ಜೀವನ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಈ ಘಟನೆ ಕುರಿತು ಸೂಕ್ತ ತನಿಖೆ ಆಗಬೇಕು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...