ಬಳ್ಳಾರಿ | ಮನರೇಗಾ ಕಾರ್ಮಿಕರಿಗೆ ಎರಡು ವರ್ಷಗಳಿಂದ ಕೂಲಿ ನೀಡಿಲ್ಲ: ಶಾಂತಮ್ಮ ಅರೋಪ

Date:

ಹೊಸ ದರೋಜಿ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಕಾರ್ಮಿಕರಿಗೆ ಕಳೆದ ಎರಡು ವರ್ಷಗಳಿಂದ ಕೂಲಿ ನೀಡಿಲ್ಲ ಎಂದು ಕಾರ್ಮಿಕರಾದ ಶಾಂತಮ್ಮ ಆರೋಪಿಸಿದರು.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡು ವರ್ಷಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ಮೇಟಿಗಳಿಗೆ ಕೂಲಿಯನ್ನು ನೀಡದ ಕಾರಣ ಗ್ರಾಮ ಇಪ್ಪತ್ತಕ್ಕೂ ಹೆಚ್ಚು ಮೇಟಿಗಳೊಂದಿಗೆ ಜಿಲ್ಲಾ ಪಂಚಾಯತ್ ಎದುರು‌ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಮನರೇಗಾ ಯೋಜನೆಯಲ್ಲಿ ಕೆಳಸ ಮಾಡಿದ ಮೇಟಿಗಳಿಗೆ ಕಳೆದ ಎರಡು ವರ್ಷಗಳಿಂದ‌ ಪಿಡಿಒ ಪ್ರಭುಲಿಂಗನಗೌಡ ಕೂಲಿ ನೀಡಿಲ್ಲ. ಇದರಿಂದ ನಮ್ಮ ಜೀವನ ದುಸ್ತರವಾಗಿದೆ. ಆದಷ್ಟು ಶೀಘ್ರದಲ್ಲಿ ನಮ್ಮ ಕೂಲಿಯನ್ನು ಬಿಡುಗಡೆ ಮಾಡಬೇಕು. ನಮ್ಮ ಕೂಲಿಯನ್ನು ನೀಡುವಂತೆ ಹಲವಾರು ಬಾರಿ ಒತ್ತಾಯಿಸಿದರೂ ಕೂಡ ಅವರು ಕಿವುಡರಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮನರೇಗಾ ಕಾರ್ಮಿಕರಿಗೆ ಸಿಗದ ವೇತನ 1

“ಮೇಟಿಗಳಿಗೆ ತಮ್ಮ ಕುಟುಂಬದ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಆದಷ್ಟು ಶೀಘ್ರದಲ್ಲಿ ಸಿಎಸ್ ಅವರು ಮೇಟಿಗಳ ಕೂಲಿಯನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ನಾವು ಹಲವಾರು ಜನ ಮನರೇಗಾ ಕೂಲಿಕಾರರನ್ನು ಕರೆದುಕೊಂಡು ಕೂಲಿ ಕೆಲಸವನ್ನು ಮಾಡಿಸಿದರೂ ಕೂಡ ಪಿಡಿಒ, ಜೆಇ ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ಅವರು ನಮ್ಮಿಂದ ಕಮಿಷನ್ ಕೇಳುತ್ತಿದ್ದಾರೆ. ಕಮಿಷನ್ ಕೊಡಲು ಒಪ್ಪದೇ ಇದ್ದಾಗ ಹೀಗೆ ನಮ್ಮನ್ನು ವರ್ಷಾನುಗಟ್ಟಲೆ ನಮ್ಮ ಕೂಲಿಯನ್ನು ನೀಡದೇ ಸತಾಯಿಸುತ್ತಿದ್ದಾರೆ. ಹೊಸ ದರೋಜಿ ಪಿಡಿಒ ಪ್ರಭುಲಿಂಗನಗೌಡ, ಎ.ಡಿ ರೇಣುಕಾರಾಧ್ಯ, ಜೆಇ ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ವಿರುದ್ಧ ಕ್ರಮ ಕೈಗೊಂಡು ನಮ್ಮ ಕೂಲಿಯನ್ನು ಬಿಡುಗಡೆಗೊಳಿಸಿ ಕೊಡಬೇಕು” ಎಂದು ಶಾಂತಮ್ಮ ಒತ್ತಾಯಿಸಿದರು.

“ಮನರೇಗಾ ಕಾರ್ಮಿಕರಿಗೆ ಕೇವಲ ₹70ರಿಂದ ₹100ವರೆಗೆ ಮಾತ್ರ ಕೂಲಿ ನೀಡುತ್ತಿದ್ದಾರೆ. ಇನ್ನುಳಿದ ಹಣವನ್ನು ಅಧಿಕಾರಿಗಳು ಗುಳುಂ ಮಾಡುತ್ತಿದ್ದಾರೆ. ಎಲ್ಲ ಅಧಿಕಾರಿಗಳಿಗೆ ಸಮಾನವಾಗಿ ಕಮಿಷನ್ ಸಂದಾಯವಾದಲ್ಲಿ ಮನರೇಗಾ ಕೆಲಸವನ್ನು ಸುಸೂತ್ರವಾಗಿ ನಡೆಸಿಕೊಳ್ಳುತ್ತಾರೆ. ಇಲ್ಲವಾದಲ್ಲಿ ಕೇವಲ ₹60 ರಿಂದ ₹100 ಕೂಲಿ ಹಣವನ್ನು ಸಂದಾಯ ಮಾಡುತ್ತಾರೆ. ಕಳೆದ ಮೂರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಟ್ರಂಚ್ ವರ್ಕ್ ಮಾಡುತ್ತಿದ್ದಾರೆ. ಈ ಕಾಮಗಾರಿಯಲ್ಲಿ ಕೇವಲ ಅರ್ಧ ಅಡಿ ಮತ್ತು ಮುಕ್ಕಾಲು ಅಡಿಗಳಷ್ಟು ಮಾತ್ರ ಕೆಲಸ ನಡೆಯುತ್ತಿದ್ದು, ಈ ಹಣವನ್ನು ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

“ನಮಗೆ ಕಳೆದ ಎರಡು ವರ್ಷಗಳಿಂದ ಬರಬೇಕಾದ ಬಾಕಿ ಕೂಲಿಯನ್ನು ಬಿಡುಗಡೆಗೊಳಿಸಬೇಕು. ಮನರೇಗಾ ಕೂಲಿ ಕಾರ್ಮಿಕರಿಗೆ ಪ್ರತಿದಿನ ₹370ಗಳ ಕೂಲಿಯನ್ನು ಅವರ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಹಲವಾರು ಮೇಟಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮನರೇಗಾ ಕೂಲಿ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...