ಬಳ್ಳಾರಿ | ಏ.1 ರಿಂದ ಮನರೇಗಾ ಕೂಲಿ ₹370ಕ್ಕೆ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್

Date:

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು ಏ.1 ರಿಂದ ₹370ಕ್ಕೆ ಹೆಚ್ಚಳ ಮಾಡಲಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದರು.

ಮನರೇಗಾ ಯೋಜನೆಯಡಿ ಪ್ರಸ್ತುತ ವರ್ಷದಲ್ಲಿ ₹349 ಕೂಲಿ ನೀಡುತ್ತಿದ್ದು, ಅದನ್ನು ಪರಿಷ್ಕರಿಸಿ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಜನರು ವಲಸೆ ಹೋಗುವುದನ್ನು ತಪ್ಪಿಸಿ ಗ್ರಾಮದ ಬಡ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ, ತಮ್ಮ ಗ್ರಾಮದಲ್ಲೇ 100 ದಿನಗಳವರೆಗೆ ಕೆಲಸದಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಿದರು.

ಈ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್‌ಪೋರ್ಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...