ಬಳ್ಳಾರಿ | ಬಯಲಾಟ ಪ್ರದರ್ಶನ ಮಾಡಿದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿದೆ: ರಂಗ ನಿರ್ದೇಶಕರಿಂದ ದೂರು

Date:

ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಕಾರ್ಯದರ್ಶಿ ಹಾಗೂ ಹಾರ್ಮೋನಿಯಂ ಮೇಷ್ಟ್ರು ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮದಲ್ಲಿ ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಮೋಕಾ ಗ್ರಾಮದಲ್ಲಿ ಬಯಲಾಟ ಪ್ರದರ್ಶನ ಮಾಡಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿ ಇಲಾಖೆಯಿಂದ  ಹಣ ಪಡೆದಿದ್ದಾರೆ ಎಂದು ಹಿರಿಯ ಕಲಾವಿದ ಹಾಗೂ ರಂಗ ನಿರ್ದೇಶಕರಾದ ಜಗದೀಶ್ ಅವರು ದೂರು ನೀಡಿದ್ದಾರೆ.

ಈ ಸಂಬಂಧ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್  ಅವರಿಗೆ ಜಗದೀಶ್ ಅವರು ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

IMG 20240810 WA0000

ಈ ಬಗ್ಗೆ ಜಗದೀಶ್ ಅವರು ಮಾತನಾಡಿದ್ದು, “ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಇತ್ತೀಚೆಗೆ ಶಂಕರ ಬಂಡೆ ಯಲ್ಲನ ಗೌಡರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾಗಿದೆ. ಅದರ ಕಾರ್ಯದರ್ಶಿಯಾಗಿರುವ ಮುದ್ದಟ ನೂರು ತಿಪ್ಪೇಸ್ವಾಮಿ ಅವರು ಮೋಕಾ ಗ್ರಾಮದಲ್ಲಿ ಬಯಲಾಟ ಪ್ರದರ್ಶನ ಮಾಡಿರುವುದಾಗಿ ಹೇಳಿ ಬೇರೆ ಊರಿನ ಹಳೆಯ ಫೋಟೋ ನೀಡಿ ಹಣ ಪಡೆದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೋಲಾರ | ಕೋಚಿಮುಲ್ ಕಾಂಗ್ರೆಸ್ ಸರ್ಕಾರದ ಕೃಪಾಪೋಷಿತ ನಾಟಕ ಮಂಡಳಿ : ಕೆ ವಿ ನಾಗರಾಜು ಆರೋಪ

“ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಿರುವ ದಾಖಲೆಗಳನ್ನು ಗಮನಿಸಿದಾಗ ಯಾವುದೋ ಕಲಾ ಟ್ರಸ್ಟ್ ಪ್ರಾಯೋಜಿತ ಕಾರ್ಯಕ್ರಮ ಏರ್ಪಡಿಸಿದ ವಿವರ ಬ್ಯಾನರಿನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆ ಫೋಟೋದಲ್ಲಿರುವ ದಿನಾಂಕವೇ ಬೇರೆಯಾಗಿದ್ದು, 27.10.2021 ದಿನಾಂಕದ ಬಯಲಾಟಕ್ಕೆ 05.12.2021 ದಿನಾಂಕದ ಫೋಟೋ ಸಲ್ಲಿಸಿ ಇಲಾಖೆಗೆ ವಂಚಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ರಂಗ ನಿರ್ದೇಶಕ ಕೆ. ಜಗದೀಶ್, ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...