ಬಳ್ಳಾರಿ | ಜನತಾದರ್ಶನದಲ್ಲಿ ನೂಕು ನುಗ್ಗಲು: ಅಹವಾಲು ನೀಡಲು ಹೈರಾಣಾದ ಜನತೆ

Date:

ಬಳ್ಳಾರಿ ನಗರದ ಹೊಸ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್‌ ಜಮೀರ್ ಅಹಮದ್‌ ಖಾನ್‌ ಉಪಸ್ಥಿತಿಯೊಂದಿಗೆ ನಡೆದ ಜನತಾದರ್ಶನಕ್ಕೆ ನಗರದ ಹಾಗೂ ಸುತ್ತಮುತ್ತಲ ಪ್ರದೇಶದ ಬಹಳಷ್ಟು ಸಾರ್ವಜನಿಕರು ನೆರೆದಿದ್ದು, ಅರ್ಜಿ ಸಲ್ಲಿಸಲು ನಾ ಮುಂದು ತಾ ಮುಂದು ಎಂದು ವೇದಿಕೆ ಕಡೆ ನುಗ್ಗತೊಡಗಿದರು. ಜನರನ್ನು ತಡೆದು ಸರತಿ ಸಾಲಿನಲ್ಲಿ ನಿಲ್ಲಿಸಲು ಕಂದಾಯ ಇಲಾಖೆಯ ಪರಿವೀಕ್ಷಕರು ಗ್ರಾಮಾಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಪೊಲೀಸರೊಂದಿಗೆ ಸೇರಿ ಹರಸಾಹಸಪಟ್ಟರು.

ಅಹವಾಲು ಸಲ್ಲಿಸಲು ಸೇರಿದ ಜನ ನಾವು ಸಚಿವರಿಗೇ ಮನವಿ ಕೊಡಬೇಕೆಂದು ಪಟ್ಟು ಹಿಡಿದುಕೊಂಡಿದ್ದರಿಂದ ಈ ನೂಕುನುಗ್ಗಲು ಮತ್ತು ಗೊಂದಲಕ್ಕೆ ಕಾರಣವಾಯಿತು. ಜನತಾದರ್ಶನ ಆಯೋಜಿಸಿದ ಜಿಲ್ಲಾಡಳಿತ ವ್ಯವಸ್ಥಿತವಾದ ಸಿದ್ಧತೆಯನ್ನು ಮಾಡಿಕೊಳ್ಳದೇ ಇದ್ದುದರಿಂದ ಈ ಗೊಂದಲಕ್ಕೆ ಕಾರಣವಾಯಿತೆಂದು ಮನವಿ ಕೊಡಲು ಬಂದವರು ದೂರಿದರು. ಇದಕ್ಕೆ ಕೆಲ ಹೊತ್ತು ಮಳೆರಾಯನ ಕಾಟದಿಂದಲೂ ಕಾರ್ಯಕ್ರಮ ಗಲಿಬಿಲಿಯಾಗಲು ಕಾರಣವಾಯಿತು. ಈ ನಡುವೆ ಅಹವಾಲು ಸಲ್ಲಿಸಲು ಬಂದ ಜನತೆ ಹೈರಾಣಾದರು.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣ ಶಾಸಕ ನಾಗೇಂದ್ರ, ನಗರ ಶಾಸಕ ಭರತ್ ರೆಡ್ಡಿಯವರು ಸಾಧ್ಯವಾದಷ್ಟು ಎಲ್ಲರಿಂದಲೂ ಮನವಿ ಪತ್ರಗಳನ್ನು ಪಡೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ವೇದಿಕೆ ಮೇಲೆ ಬರಲು ಸಾಧ್ಯವಾಗದ ಜನರ ಹತ್ತಿರ ಖುದ್ದಾಗಿ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳು ಹೋಗಿ ಮನವಿ ಪತ್ರವನ್ನು ಪಡೆದುಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...