ಬಳ್ಳಾರಿ | ಸಮರ್ಪಕ ರಸಗೊಬ್ಬರ ಪೂರೈಕೆಗೆ ಪ್ರಾಂತ ರೈತ ಸಂಘ ಆಗ್ರಹ

Date:

ಬಳ್ಳಾರಿ ಜಿಲ್ಲೆಯಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹಾಗೂ ಬೆಲೆ ಏರಿಕೆ ಹೆಚ್ಚಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಗೊಬ್ಬರದ ಕೊರತೆ ನೀಗಿಸಿ, ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಬೇಕು. ರೈತರಿಗೆ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಆಗ್ರಹಿಸಿ ರಾಜ್ಯ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಅನಿಲ್‌ಕುಮಾರ್ ಗೆ ಮನವಿ ಸಲ್ಲಿಸಿದರು.

ಸಂಡೂರು ತಾಲೂಕಿನಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹೆಚ್ಚಾಗಿದ್ದಲ್ಲದೇ ಕಾಳಸಂತೆಯಲ್ಲಿ ಹೆಚ್ವಿನ ಬೆಲೆಗೆ ಮಾರಾಟವಾಗುತ್ತಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ಜಿ.ಪಂಪನಗೌಡ ಮಾತನಾಡಿ, “ತಾಲೂಕಿನಾದ್ಯಂತ ಉತ್ತಮ ಮಳೆ ಸುರಿದಿದೆ. ರೈತರು ಬಿತ್ತನೆ ಮಾಡಿದ ಹೈಬ್ರಿಡ್ ಜೋಳ, ಮೆಕ್ಕೆಜೋಳ ಸೇರಿ ನಾನಾ ಬೆಳೆಗಳಿಗೆ ಯೂರಿಯಾ ಸೇರಿದಂತೆ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಸರಕಾರ ಯೂರಿಯಾ ಸೇರಿ ಇತರೆ ಗೊಬ್ಬರದ ಬೆಲೆ ಏರಿಸಿರುವುದು ಅನ್ಯಾಯ. ರೈತರಿಗೆ ಅಗತ್ಯಕ್ಕೆ ತಕ್ಕಷ್ಟು ಗೊಬ್ಬರದ ಪೂರೈಕೆ ಮಾಡದಿರುವುದರಿಂದ ಕಾಳಸಂತೆಯಲ್ಲಿ ನಿಗದಿಗಿಂತ ಹೆಚ್ಚಿನ ಬೆಲೆಯಲ್ಲಿ ಗೊಬ್ಬರ ಮಾರಾಟ ಮಾಡಿ ರೈತರನ್ನು ವಂಚಿಸಲಾಗುತ್ತಿದೆ. ಕೃತಕ ಗೊಬ್ಬರದ ಅಭಾವ ಸೃಷ್ಟಿಸಬಾರದು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಎಐಕೆಕೆಎಂಎಸ್ ಆಗ್ರಹ

ಈ ವೇಳೆ ಕೆ.ನಾಯ್ಡು, ಪ್ರಾಂತ ರೈತ ಸಂಘದ ಕಾರ್ಯದರ್ಶಿ ಖಲಂದರ್ ಬಾಷಾ, ಕೆ.ಆರ್.ಎಸ್.ಪಕ್ಷದ ತಾಲೂಕು ಅಧ್ಯಕ್ಷ ಖಾದರ್ ಬಾಷಾ, ಜನ ಸಂಗ್ರಾಮ ಪರಿಷತ್‌ನ ಶ್ರೀಶೈಲ ಆಲ್ಟಳ್ಳಿ, ಕೆಪಿಆರ್‌ಎಸ್ ಅಧ್ಯಕ್ಷ ಪಿ.ರಮೇಶ ಹಾಗೂ ಇತರರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...